Advertisement
ಬಿಟ್ ಕಾಯಿನ್ ಪ್ರಕರಣ ಮುಚ್ಚಿ ಹಾಕಲು ಸರಕಾರ ಯತ್ನಿಸುತ್ತಿದೆ. ಇದರ ಹಿಂದೆ ಪ್ರಭಾವಿಗಳು, ಪೊಲೀಸ್ ಅಧಿಕಾರಿಗಳು ಇದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಗುಸು ಗುಸು ಪ್ರಾರಂಭವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಗೃಹ ಸಚಿವಾಲ ಯವು ರಾಜ್ಯ ಸರಕಾರ ಮತ್ತು ರಾಜ್ಯ ಪೊಲೀಸ್ ನಿರ್ದೇಶಕರಿಂದ ಕೆಲವು ಮಾಹಿತಿ ಕೇಳಿದೆ ಎನ್ನಲಾಗಿದೆ.
Related Articles
Advertisement
ಗಂಭೀರ ಪರಿಗಣನೆ:
ಬಿಟ್ ಕಾಯಿನ್ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ವಿಶೇಷವಾಗಿ ಸಿಒಡಿ ತನಿಖೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ನೀಡಲು ಆಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿ ನಮ್ಮ ಪೊಲೀಸರು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಇದರ ಮೂಲಕ್ಕೆ ಹೋಗಿ ಹುಡುಕುತ್ತಿದ್ದಾರೆ. ಪ್ರಕರಣದಲ್ಲಿ ಪೊಲೀಸರ ಸಹಿತ ಯಾರೇ ಇದ್ದರೂ ತಪ್ಪಿತಸ್ಥರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಅಂತೆ ಕಂತೆ ಬೇಡ. ಸಿದ್ದರಾಮಯ್ಯ ಸಿಎಂ ಆಗಿದ್ದವರು. ಇದು ದೇಶದ ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ವಿಚಾರ. ಹೀಗಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದರು.
ಸಿದ್ದು ಟ್ವೀಟ್ :
ಡ್ರಗ್ಸ್ ಮತ್ತು ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಪ್ರಭಾವಿ ರಾಜ ಕಾರಣಿಗಳಿದ್ದಾರೆ ಎಂಬ ಮಾಹಿತಿ ಇದೆ. ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ಕೇಂದ್ರ ಸರಕಾರ ಪ್ರಭಾವ ಬೀರದೆ ನಿಷ್ಪಕ್ಷವಾಗಿ ತನಿಖೆ ನಡೆಸಬೇಕು. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾದರೂ ಕಠಿನ ಶಿಕ್ಷೆ ಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಬಿಟ್ ಕಾಯಿನ್ ಪ್ರಕರಣದಲ್ಲಿ ಸುಮಾರು 10 ಸಾವಿರ ಕೋ.ರೂ. ವಹಿವಾಟಿನ ಅನುಮಾನ ಇದೆ. ಇದು ಪ್ರಧಾನಿ ಕಾರ್ಯಾಲಯಕ್ಕೆ ಹೋಗಿದ್ದು, ಅಲ್ಲಿಂದ ವರದಿ ಕೇಳಲಾಗಿದೆ. ಈ ಬಿಟ್ ಕಾಯಿನ್ ಪ್ರಕರಣ ಸರಕಾರಕ್ಕೆ ಕಂಟಕವಾಗಬಹುದು ಎಂದು ಭಾವಿಸುತ್ತೇನೆ.– ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ