Advertisement
ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದ ಮರುದಿನವೇ ಶೆಟ್ಟರ್ ದಿಲ್ಲಿಯತ್ತ ಹೋಗಿರುವುದು ನಾನಾ ಊಹಾಪೋಹಗಳನ್ನು ಹುಟ್ಟುಹಾಕಿದೆ. ಶೆಟ್ಟರ್ ರವಿವಾರದವರೆಗೂ ದಿಲ್ಲಿಯಲ್ಲೇ ಇರಲಿದ್ದಾರೆ. ಇದರ ನಡುವೆ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ ಸೇರಿ ಇನ್ನೂ ಕೆಲವು ನಾಯಕರು ದಿಲ್ಲಿಗೆ ಹೋಗುವ ಸಾಧ್ಯತೆ ಇದೆ ಎಂದೂ ಮೂಲಗಳು ತಿಳಿಸಿವೆ.
Related Articles
Advertisement
ಶೆಟ್ಟರ್ ಗುರುವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬಂದು ಅನಂತರ ದಿಲ್ಲಿಗೆ ತೆರಳಲಿ ದ್ದಾರೆ ಎನ್ನಲಾಗಿತ್ತು. ಆದರೆ ಹುಬ್ಬಳ್ಳಿಯಿಂದಲೇ ದಿಲ್ಲಿಗೆ ಬರುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ಅಲ್ಲಿಂದಲೇ ತೆರಳಿದರು ಎನ್ನಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನವರು ದಾಖಲೆ ಇಲ್ಲದೆ ಮಾತನಾಡುತ್ತಿದ್ದಾರೆ. ತಮ್ಮ ದಿಲ್ಲಿ ಪ್ರವಾಸ ವೈಯಕ್ತಿಕ ಎಂದು ಶೆಟ್ಟರ್ ಅವರೇ ಹೇಳಿದ್ದಾರೆ ಎಂದು ತುಮಕೂರಿನಲ್ಲಿ ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯಿಸಿದ್ದಾರೆ.
ಮುಂದುವರಿದ ವಾಗ್ಧಾಳಿ:
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ ಸರಕಾರದ ವಿರುದ್ಧ ವಾಗ್ಧಾಳಿ ಮುಂದುವರಿ ಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ನಡುವಿನ ಸಂಭಾಷಣೆ ಆಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ಕಾಂಗ್ರೆಸ್ ಪ್ರಸ್ತಾವಿಸಿದೆ.
ಬಿಟ್ ಕಾಯಿನ್ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ತತ್‌ಕ್ಷಣ ತನಿಖೆ ನಡೆಸಿ ಆರೋಪ ಸುಳ್ಳೆಂದು ಸಾಬೀತುಪಡಿಸಿ ಎಂದು ಸೂಚಿಸಬೇಕಾಗಿದ್ದ ಪ್ರಧಾನಿ ಮೋದಿಯವರೇ “ಆರೋಪ ನಿರ್ಲಕ್ಷಿಸಿ’ ಎಂದು ಹೇಳುವುದು ಸರಿಯೇ? ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಇಲಾಖೆ, ನ್ಯಾಯಾಲಯಗಳ ಅಗತ್ಯ ಇಲ್ಲವೇ, ಪ್ರಧಾನಮಂತ್ರಿಯವರ ಏಕಪಕ್ಷೀಯ ತೀರ್ಮಾನವೇ ಅಂತಿಮವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ನಮ್ಮ ಬಾಯಿ ಮುಚ್ಚಿಸಲು ಪ್ರಯತ್ನ ಮಾಡಬೇಡಿ. ಕೇಂದ್ರ ಹಾಗೂ ರಾಜ್ಯದಲ್ಲಿ ನಿಮ್ಮದೇ ಸರಕಾರ ಇದೆ. ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆ ಎಳೆಯಿರಿ ಎಂದು ಸವಾಲು ಹಾಕಿದ್ದಾರೆ.
ಮತ್ತೂಂದೆಡೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರಕಾರದಲ್ಲಿ ಮೂರನೇ ಮುಖ್ಯಮಂತ್ರಿ ಯಾಗುವ ತಮ್ಮ ಮಾತಿಗೆ ಈಗಲೂ ಬದ್ಧ. ಮುಂದೆ ಕಾದುನೋಡಿ ಎಂದು ಹೇಳಿದ್ದಾರೆ. ಜತೆಗೆ ಶ್ರೀಕಿ ಹಾಗೂ ಆತನ ಸ್ನೇಹಿತ ನಡೆಸಿರುವ ಬಿಟ್ ಕಾಯಿನ್ ವ್ಯವಹಾರಗಳ ಕುರಿತ ಕೆಲವು ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ. ಸರಕಾರಕ್ಕೆ ಕೆಲವು ಪ್ರಶ್ನೆಗಳನ್ನೂ ಹಾಕಿದ್ದಾರೆ.
ಆಡಿಯೋ ಬಿಡುಗಡೆ :
ರಾಜಕೀಯ ವಾಗ್ಯುದ್ಧ ಮುಂದುವರಿದಿರುವಂತೆಯೇ ಬಿಟ್‌ಕಾಯಿನ್ ಹಗರಣದ ಸಂಬಂಧ ಹಿರಿಯ (ಐಪಿಎಸ್?) ಅಧಿಕಾರಿ ಮತ್ತು ಕಿರಿಯ ಅಧಿಕಾರಿ (ಸಿಸಿಬಿ ಇನ್‌ಸ್ಪೆಕ್ಟರ್?) ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಪ್ರಕರಣದಲ್ಲಿ ರಾಜಕಾರಣಿಗಳು ಮತ್ತು ಪೊಲೀಸ್ ಅಧಿಕಾರಿಗಳೂ ಭಾಗಿಯಾಗಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಆಡಿಯೋ ದಲ್ಲಿ, ರಾಜಕಾರಣಿಗಳು ಮತ್ತು ಪೊಲೀಸ್ ಅಧಿಕಾರಿಗಳು ಅಕ್ರಮ ನಡೆಸಿರುವ ಬಗ್ಗೆ ಇಬ್ಬರು ಮಾತುಕತೆ ನಡೆಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಅಕೌಂಟ್‌ನಿಂದ ಅನೇಕ ಮಂದಿಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿಯನ್ನು ಆಡಿಯೊ ಮೂಲಕ ಇನ್‌ಸ್ಪೆಕ್ಟರ್ ಬಿಚ್ಚಿಟ್ಟಿ ದ್ದಾರೆ. ಮಂತ್ರಿಗಳಿಗೆ ಬಿಟ್ ಕಾಯಿನ್ ವರ್ಗಾವಣೆ ಯಾಗಿದೆ ಎಂದೂ ಅವರು ಹೇಳಿಕೊಂಡಿದ್ದಾರೆ.
ಡಿಕೆಶಿ ಬಾಂಬ್ :
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ನಮಗೆ ದಾಖಲೆ ಒದಗಿಸುತ್ತಿರುವುದೇ ಬಿಜೆಪಿ ಸಚಿವರು ಹಾಗೂ ಸರಕಾರದ ಅಧಿಕಾರಿ ಗಳು. ಶತ ಪ್ರತಿಶತದಷ್ಟು ದಾಖಲೆ ಸಂಗ್ರಹಿಸ ಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ “ಬಾಂಬ್’ ಸಿಡಿಸಿದ್ದಾರೆ. ಇದರಿಂದ ರಾಜಕೀಯ ವಲಯದಲ್ಲಿ ಗುಸು ಗುಸು ಪ್ರಾರಂಭವಾಗಿದೆ. ಪ್ರಧಾನಿಗೆ ಬರೆಯಲಾಗಿರುವ ಪತ್ರದ ಬಗ್ಗೆ ಯಾರೂ ಯಾಕೆ ಮಾತನಾಡುತ್ತಿಲ್ಲ ಎಂದೂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಆಧಾರರಹಿತ ಆರೋಪಗಳಿಗೆ ಉತ್ತರಿಸಲಾಗದು: ಸಿಎಂ :
ಬಿಟ್‌ಕಾಯಿನ್ ವಿಚಾರವಾಗಿ ಎಲ್ಲವೂ ಆಧಾರರಹಿತ ಆರೋಪ ಗಳು. ರಾಜ್ಯ ಸರಕಾರ ಈಗಾಗಲೇ ಇಡಿ ತನಿಖೆಗೆ ವಹಿಸಿದೆ. ಪ್ರತಿದಿನ ಇಂತಹ ಆಧಾರರಹಿತ ಆರೋಪಗಳಿಗೆ ಉತ್ತರಿಸಲು ಆಗುವುದಿಲ್ಲ. ಯಾವ ಆಧಾರದಲ್ಲಿ ಈ ಆರೋಪಗಳನ್ನು ಮಾಡುತ್ತಿದ್ದಾರೆ? ಒಬ್ಬೊಬ್ಬರು ಎರಡು ಸಾವಿರ, ಮೂರು ಸಾವಿರ ಅಂತ ಒಂದೊಂದು ಸಂಖ್ಯೆ ಹೇಳುತ್ತಿದ್ದಾರೆ. ವಿಪಕ್ಷಗಳು ರಾಜಕೀಯ ಪ್ರೇರಿತ ಆರೋಪ ಮಾಡುತ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.