Advertisement

ಚೀನಾ ಗಡಿ ಬಂದ್: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು, ಕಡಿಮೆ ಊಟ ಮಾಡಿ ಎಂದ ಕಿಮ್!

03:20 PM Oct 28, 2021 | Team Udayavani |

ಸಿಯೋಲ್: ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಪ್ರವಾಸಿಗರೇ ಎಚ್ಚರ : ಚಿಕ್ಕಮಗಳೂರಿನ ಎತ್ತಿನಭುಜ ಪ್ರವಾಸಿ ತಾಣದಲ್ಲಿವೆ ಕಾಡಾನೆ ಹಿಂಡು

ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವರದಿ ವಿವರಿಸಿದೆ.

2025ರಲ್ಲಿ ಚೀನಾ ಜತೆಗಿನ ಗಡಿಯನ್ನು ಪುನರಾರಂಭಿಸುವವರೆಗೆ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕೆಂದು ಕಿಮ್ ಎಚ್ಚರಿಕೆಯ ಸಂದೇಶವನ್ನು ಹೊರಡಿಸಿದ್ದಾರೆ. ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ. ಅದೇ ರೀತಿ ಇನ್ನು ಮೂರು ವರ್ಷಗಳ ಕಾಲ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಕೊರಿಯಾ 2020ರ ಜನವರಿಯಲ್ಲಿ ಚೀನಾ ಜತೆಗೆ ಹೊಂದಿಕೊಂಡಿದ್ದ ಗಡಿಯನ್ನು ಮುಚ್ಚಿತ್ತು. ಆದರೆ ಉತ್ತರ ಕೊರಿಯಾದ ಈ ನಿರ್ಧಾರದಿಂದಾಗಿ ದೇಶದ ಆರ್ಥಿಕತೆ ಮೇಲೆ ಭಾರೀ ಪರಿಣಾಮ ಬೀರಿತ್ತು. ಅಷ್ಟೇ ಅಲ್ಲ ಪ್ರತಿದಿನ ದಿನಬಳಕೆ ವಸ್ತುಗಳ ಬೆಲೆಯೂ ಗಗನಕ್ಕೇರತೊಡಗಿರುವುದಾಗಿ ವರದಿ ವಿವರಿಸಿದೆ.

Advertisement

ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ ಮಾಡಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ. ಚೀನಾ ಜತೆಗಿನ ವ್ಯಾಪಾರ, ವಹಿವಾಟು ಬಂದ್ ಮಾಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ  ಉತ್ತರಕೊರಿಯಾದಲ್ಲಿ ಬಿರುಗಾಳಿ ಮತ್ತು ಪ್ರವಾಹದಿಂದಾಗಿ ಬೆಳೆಗಳು ನಾಶವಾದ ಪರಿಣಾಮ ಆಹಾರ ಬಿಕ್ಕಟ್ಟು ವಿಕೋಪಕ್ಕೆ ಹೋಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next