Advertisement

ಎನ್ ಆರ್ ಸಿಗೆ ಬೆಂಬಲ ಕೊಡಲ್ಲ; ಪೌರತ್ವ ಕಾಯ್ದೆಯಿಂದ ತೊಂದರೆ ಇಲ್ಲ: ಒಡಿಶಾ CM ಪಟ್ನಾಯಕ್

09:47 AM Dec 19, 2019 | Nagendra Trasi |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ತಮ್ಮ ರಾಜ್ಯದಲ್ಲಿ ಎನ್ ಆರ್ ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಯನ್ನು ಜಾರಿಗೊಳಿಸಲು ಬೆಂಬಲ ನೀಡುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ತಿಳಿಸಿದ್ದಾರೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆಗೆ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬೆಂಬಲ ನೀಡಿತ್ತು. ಪೌರತ್ವ ತಿದ್ದುಪಡಿ (ಸಿಎಎ)ಕಾಯ್ದೆಯಿಂದ ಭಾರತೀಯ ಪ್ರಜೆಗಳಿಗೆ ಯಾವುದೇ ತೊಂದರೆ ಇಲ್ಲ. ಇದು ವಿದೇಶಿ ವಲಸಿಗ ನಿರಾಶ್ರಿತರಿಗೆ ಸಂಬಂಧಿಸಿದ್ದು ಎಂದು ಹೇಳಿದರು.

ಆದರೆ ಎನ್ ಆರ್ ಸಿಯನ್ನು ಲೋಕಸಭೆಯಲ್ಲಾಗಲಿ, ರಾಜ್ಯಸಭೆಯಲ್ಲಾಗಲಿ ಬೆಂಬಲ ನೀಡುವುದಿಲ್ಲ ಎಂದು ಬಿಜೆಪಿ ಸಂಸದರು ಸ್ಪಷ್ಟಪಡಿಸಿದ್ದಾರೆ. ನಾನು ದೇಶದ ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ…ಶಾಂತಿ ಕಾಪಾಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪಟ್ನಾಯಕ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next