Advertisement

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಏಣಿಕೆ! ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

02:59 PM Nov 10, 2020 | sudhir |

ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣಾ ಮತ ಏಣಿಕೆ ಇಂದು ನಡೆದಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

Advertisement

ಇಲ್ಲಿನ ಗುಲ್ಬರ್ಗ ವಿವಿಯ ಗಣಿತ ಶಾಸ್ತ್ರ ವಿಭಾಗದಲ್ಲಿ ನಡೆದಿರುವ ಮತ ಏಣಿಕೆಯ ಮೊದಲ ಸುತ್ತಿನ ಮೊದಲ ಪ್ರಾಶಸ್ತ್ಯ ದ ಮತಗಳಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ 3136 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ನ ಶರಣಪ್ಪ ಮಟ್ಟೂರ 2231 ಮತ ಪಡೆದಿದ್ದಾರೆ.

ಜೆಡಿಎಸ್ ನ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ 975 ಮತಗಳನ್ನು ಪಡೆದಿದ್ದಾರೆ. ಒಟ್ಟಾರೆ ಬಿಜೆಪಿಯ ನಮೋಶಿ ಕಾಂಗ್ರೆಸ್ ಅಭ್ಯರ್ಥಿ ಗಿಂತ  905 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಸಂಜೆ ಆರರ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರ ಬೀಳಲಿದೆ.

Advertisement

Udayavani is now on Telegram. Click here to join our channel and stay updated with the latest news.

Next