ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ವಿರುದ್ದ ಪ್ರಕರಣ ದಾಖಲಿಸಲು ಬಿಜೆಪಿ ಯುವ ಮೋರ್ಚಾ ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದೆ.
ಎಫ್ ಐ ಆರ್ ದಾಖಲಿಸಬೇಕು ಎಂದು ಒತ್ತಾಯಿಸಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಆ.21ರ ಬುಧವಾರ ಬರ್ಕೆ ಠಾಣೆಗೆ ಆಗಮಿಸಿದರು.
ಎಸಿಪಿ ಪ್ರತಾಪ ಸಿಂಗ್ ತೋರಟ್ ಅವರ ಜತೆ ಮೋರ್ಚಾ ಪದಾಧಿಕಾರಿಗಳು ಮಾತುಕತೆ ನಡೆಸಿದರು.
ಪೊಲೀಸರು ಇನ್ನೂ ಕೂಡ ಕಾನೂನು ಅಭಿಪ್ರಾಯ ಪಡೆಯಬೇಕಾಗಿದೆ ಎನ್ನುತ್ತಿದ್ದಾರೆ. ಹಾಗಾಗಿ ಮತ್ತೆ ಗಡುವು ನೀಡಿದ್ದೇವೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ತಿಳಿಸಿದರು.
ಐವನ್ ಡಿಸೋಜಾ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಯವ ಮೋರ್ಚಾ ಆರೋಪಿಸಿದೆ.
ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿ ಐವನ್ ಡಿಸೋಜಾ ವಿರುದ್ದ ಆಕ್ರೋಶ ಹೊರ ಹಾಕಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.