Advertisement
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷವು 18 ಅಂಶದ ಕಾರ್ಯಕ್ರಮಗಳನ್ನು ನಡೆಸಿತ್ತು. ಈ ಬಾರಿ ಹೆಚ್ಚುವರಿಯಾಗಿ ಎಂಟು ಅಂಶಗಳನ್ನು ಸೇರ್ಪಡೆ ಮಾಡಿದ್ದು, ಮುಖ್ಯವಾಗಿ ಕೇಂದ್ರ ಸರ್ಕಾರದ ಸೌಲಭ್ಯಗಳು ತಲುಪಿರುವ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಸೆಳೆಯುವ ಕಾರ್ಯಕ್ಕೆ ಒತ್ತು ನೀಡುವಂತೆ ರಾಜ್ಯ ಬಿಜೆಪಿ ಜನಪ್ರತಿನಿಧಿಗಳಿಗೆ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Related Articles
ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಉದ್ದೇಶಿತ ಗುರಿಯಂತೆ ಸ್ಥಾನಗಳನ್ನು ಪಡೆಯಲು ಪೂರಕವಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಯಶಸ್ಸು ಸಾಧಿಸಲು ಕಾರ್ಯಕ್ರಮಪ್ರವೃತ್ತವಾಗಬೇಕು ಎಂದು ಕರೆ ನೀಡಿದರು ಎನ್ನಲಾಗಿದೆ.
Advertisement
ಹೊಸ ಕಾರ್ಯಕ್ರಮಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಕೆಲ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಗೊತ್ತುಪಡಿಸಿದ ದೇಶಾದ್ಯಂತ ಬೈಕ್‌ರ್ಯಾಲಿ ನಡೆಯಲಿದ್ದು, ರಾಜ್ಯದಲ್ಲೂ ದೊಡ್ಡ ಮಟ್ಟದಲ್ಲಿ ಬೈಕ್ ರ್ಯಾಲಿ ನಡೆಸಬೇಕು. ಪ್ರತಿ ಕಾರ್ಯಕರ್ತರು ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಶೇ.51ಕ್ಕಿಂತ ಹೆಚ್ಚು ಮತ ಗಳಿಸುವ ಸಂಕಲ್ಪ ಕೈಗೊಳ್ಳುವ ಕಾರ್ಯಕ್ರಮ ನಡೆಸಬೇಕು. ಒಬ್ಬ ಕಾರ್ಯಕರ್ತರಿಗೆ 10 ಮನೆಗಳ ಸಂಪರ್ಕ ಕಲ್ಪಿಸಿ ಅವರು ನಿರಂತರವಾಗಿ 10 ಕುಟುಂಬದೊಂದಿಗೆ ಸಂಪರ್ಕವಿಟ್ಟುಕೊಂಡು ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ತಿಳಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. “ಕಮಲ ಜ್ಯೋತಿ’ಗೆ ಆದ್ಯತೆ ನೀಡಿ
ಕಳೆದ ನಾಲ್ಕೂವರೆ ವರ್ಷದಲ್ಲಿ ಕೇಂದ್ರ ಸರ್ಕಾರದ ನಾನಾ ಯೋಜನೆಗಳು ತಲುಪಿರುವ ಫಲಾನುಭವಿಗಳ ಮತಗಟ್ಟೆವಾರು ಮಾಹಿತಿಯನ್ನು ಕೇಂದ್ರದಿಂದಲೇ ಒದಗಿಸಲಿದ್ದು, ಅದರಂತೆ ಫಲಾನುಭವಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ತಮಗೆ ಸೌಲಭ್ಯ ಕಲ್ಪಿಸಿದ ಬಿಜೆಪಿಯನ್ನು ಬೆಂಬಲಿಸುವುದಾಗಿ ಗೊತ್ತುಪಡಿಸಿದ ದಿನ ಮನೆಯಲ್ಲಿ ದೀಪ ಬೆಳಗಿಸುವ ಕಮಲ ಜ್ಯೋತಿ ಕಾರ್ಯಕ್ರಮಕ್ಕೆ ವಿಶೇಷ ಆದ್ಯತೆ ನೀಡಬೇಕು. ಕಮಲ ಕಪ್ ಕಾರ್ಯಕ್ರಮದಡಿ ಸ್ಥಳೀಯವಾಗಿ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸಿ ಯುವಜನತೆಯನ್ನು ಸೆಳೆಯಬೇಕು ಎಂದು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಹಿರಿಯ ನಾಯಕರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಇತರರು ಪಾಲ್ಗೊಂಡಿದ್ದರು. ಅನಾರೋಗ್ಯ, ವೈಯಕ್ತಿಕ ಕಾರಣಗಳಿಂದ ಕೆಲ ಶಾಸಕರು, ಸಂಸದರು ಗೈರಾಗಿದ್ದರು ಎನ್ನಲಾಗಿದೆ. ಸೋಮವಾರವೂ ಸಭೆ
ಸೋಮವಾರವೂ ದೆಹಲಿಯಲ್ಲಿ ರಾಜ್ಯ ಬಿಜೆಪಿ ಸಂಸದರು, ಶಾಸಕರ ಸಭೆ ಆಯೋಜನೆಯಾಗಿದೆ. ಬೆಳಗ್ಗೆ 11.30ಕ್ಕೆ ಸಭೆ ಆರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಬಳಿಕ ರಾಜ್ಯ ಲೋಕಸಭಾ ಕ್ಷೇತ್ರವಾರು ಶಾಸಕರು, ಪ್ರಮುಖರ ಸಭೆ ನಡೆಯಲಿದೆ. ಪಕ್ಷದ ಸಂಸದರು, ಶಾಸಕರು ಇಲ್ಲದ ಕಡೆ ಯಾವ ರೀತಿಯಲ್ಲಿ ಸಂಘಟನೆ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.