ಕಳೆದ ಶನಿವಾರ ಬಿಜೆಪಿಯ 16 ರಾಜ್ಯಗಳ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. 370 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಾಕಷ್ಟು ಸಮಾಲೋಚನೆಗಳನ್ನು ಬಿಜೆಪಿ ನಡೆಸುತ್ತಿದೆ.
Advertisement
ಮೊದಲ ಹಂತದಲ್ಲಿ ಬಿಜೆಪಿ ಅಧ್ಯಕ್ಷ ಜ.ೆ ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆಗೆ ಚರ್ಚಿಸಿದ ಬಳಿಕ ಪ್ರಧಾನಿಯೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಗೊಳಿಸಲಾಗುತ್ತಿದೆ ಎನ್ನಲಾಗಿದೆ. ಹಾಗಾಗಿ ಈ ವಾರ ಬಿಜೆಪಿಯ ಎರಡನೇ ಪಟ್ಟಿಯನ್ನು ನಿರೀಕ್ಷಿಸಬಹುದು. ಇದರಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಅಭ್ಯರ್ಥಿ ಗಳನ್ನು ಘೋಷಣೆ ಮಾಡುತ್ತಾರೆಯೇ ಕಾದು ನೋಡಬೇಕಿದೆ.
ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆಯು ಬಹುತೇಕ ಅಂತಿಮ ಗೊಂಡಿದೆ ಎಂದು ತಿಳಿದು ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಡ ರಾತ್ರಿಯವರೆಗೆ ಸಿಎಂ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಜತೆಗೆ ನಡೆಸಿದ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಒಮ್ಮತಕ್ಕೆ ಬರಲಾಗಿದೆ. ಈಗ ಗೊತ್ತಾಗಿರುವ ಪ್ರಕಾರ, ಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ ಬಿಜೆಪಿ 32, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ 3 ಮತ್ತು ಶಿಂಧೆ ನೇತೃತ್ವದ ಶಿವಸೇನೆಯು 10ರಿಂದ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.