Advertisement

ಕೇರಳ ಸಚಿವನಿಗೆ ನಿಷೇಧಿತ ಸಂಘಟನೆಯೊಂದಿಗೆ ಲಿಂಕ್ : ಬಿಜೆಪಿ ಆರೋಪ

05:54 PM Sep 28, 2022 | Team Udayavani |

ತಿರುವನಂತಪುರಂ: ಇಂಡಿಯನ್ ನ್ಯಾಷನಲ್ ಲೀಗ್ (ಐಎನ್‌ಎಲ್) ನಾಯಕ ಮತ್ತು ರಾಜ್ಯ ಸಚಿವ ಅಹಮ್ಮದ್ ದೇವರಕೋವಿಲ್ ಅವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿತ್ರ ಸಂಘಟನೆಯಾದ ನಿಷೇಧಿತ ಸಂಘಟನೆಯಾದ ರೆಹಬ್ ಇಂಡಿಯಾ ಫೌಂಡೇಶನ್‌ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಕೇರಳ ಬಿಜೆಪಿ ಬುಧವಾರ ಆರೋಪಿಸಿದೆ ಮತ್ತು ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಆಗ್ರಹಿಸಿದೆ.

Advertisement

ಇದನ್ನೂ ಓದಿ : 32 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 63 ಚಮಚ : ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರಿಗೆ ಶಾಕ್

ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ‘ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಉತ್ತರ ನೀಡಬೇಕು. ರಾಜ್ಯ ಸರಕಾರ ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಗೌರವಿಸಿದರೆ ಸಚಿವರನ್ನು ಸಂಪುಟದಿಂದ ಹೊರಹಾಕಬೇಕು. ಐಎನ್‌ಎಲ್ ಅನ್ನು ಎಡರಂಗದಿಂದ ಹೊರಹಾಕಬೇಕು” ಎಂದು ಸುರೇಂದ್ರನ್ ಆಗ್ರಹಿಸಿದ್ದಾರೆ.

ಬಿಜೆಪಿ ಆರೋಪಗಳನ್ನು ಸಚಿವರು ಸಾರಾಸಗಟಾಗಿ ನಿರಾಕರಿಸಿದ್ದು, ಇದು ಕೆ ಸುರೇಂದ್ರನ್ ಅವರ “ಹಾಸ್ಯಾಸ್ಪದ ಅಸಂಬದ್ಧತೆಯ” ಮೂಲಕ ಮಾಧ್ಯಮಗಳಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸಲು ಮಾಡಿದ ಮತ್ತೊಂದು ಪ್ರಯತ್ನ ಎಂದು ಹೇಳಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ದಿಂದ ಬೇರ್ಪಟ್ಟ ನಾಯಕರಿಂದ ರಚಿಸಲ್ಪಟ್ಟ ಐಎನ್‌ಎಲ್, ಪಿಣರಾಯಿ ವಿಜಯನ್ ಸರ್ಕಾರದಲ್ಲಿ ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗದಲ್ಲಿ ಸಮ್ಮಿಶ್ರ ಪಾಲುದಾರ ಪಕ್ಷವಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next