ಜಮ್ಮು-ಕಾಶ್ಮೀರ: ದಶಕಗಳ ಬಳಿಕ ಜಮ್ಮು-ಕಾಶ್ಮೀರ(Jammu Kashmir)ದಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮತಎಣಿಕೆ(Results) ಮಂಗಳವಾರ (ಅ.08) ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಈವರೆಗಿನ ಲೆಕ್ಕಚಾರದಲ್ಲಿ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರದ ಗದ್ದುಗೆ ಏರುವ ಸಿದ್ಧತೆಯಲ್ಲಿದೆ.
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಜನತಾ ಪಕ್ಷ ಕೇವಲ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ನಿರೀಕ್ಷಿತ ಸ್ಥಾನಗಳು ಲಭಿಸದೇ ಹಿನ್ನಡೆ ಅನುಭವಿಸುವಂತಾಗಿದೆ. ಮೆಹಬೂಬ ಮುಫ್ತಿ ನೇತೃತ್ವದ ಪಿಡಿಪಿ ಕೇವಲ 2 ಸ್ಥಾನಗಳಲ್ಲಿ ಮುನ್ನಡೆ ಗಳಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ.
ಹರ್ಯಾಣದಲ್ಲಿ ತೀವ್ರ ಹಣಾಹಣಿ:
90 ಸ್ಥಾನಗಳ ಹರ್ಯಾಣ ವಿಧಾನಸಭೆ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಈವರೆಗಿನ ಎಣಿಕೆ ಪ್ರಕಾರ ಕಾಂಗ್ರೆಸ್ ಪಕ್ಷ 40 ಸ್ಥಾನಗಳಲ್ಲಿ, ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
90 ವಿಧಾನಸಭಾ ಕ್ಷೇತ್ರಗಳಲ್ಲಿ ಬರೋಬ್ಬರಿ 1031 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಇದರಲ್ಲಿ 464 ಮಂದಿ ಸ್ವತಂತ್ರ ಅಭ್ಯರ್ಥಿಗಳಾಗಿದ್ದು, 101 ಮಂದಿ ಮಹಿಳೆಯರು. ಅ.05ರಂದು ಒಂದೇ ಹಂತದಲ್ಲಿ ಹರ್ಯಾಣದಲ್ಲಿ ಮತದಾನ ನಡೆದಿತ್ತು.