Advertisement
ಯತ್ನಾಳ್ ಬಣ ಪದೇಪದೆ ಸಭೆ ಸೇರಿ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ವಿಜಯೇಂದ್ರ ಬಣ ಸಭೆ ನಡೆಸಿ ತಿರುಗೇಟು ನೀಡುವ ಪ್ರಯತ್ನ ನಡೆಸಿದ್ದು ಪಕ್ಷ ವಿರೋಧಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳು ಯಾರೇ ಇದ್ದರೂ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದೆ.
Related Articles
Advertisement
ಬೆಂಗಳೂರಿನಿಂದ ಮೈಸೂರು ವರೆಗೆ ನಡೆದ ಮುಡಾ ಪಾದಯಾತ್ರೆ ಯಶಸ್ವಿಯಾಗಿದೆ. ಇದನ್ನು ಸಹಿಸದವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಾದಯಾತ್ರೆಯನ್ನು ವಿರೋಧಿಸಿದವರು ಪಕ್ಷದ ಉಳಿವಿಗಾಗಿ ಮಾತನಾಡುತ್ತಿರುವುದು ದುರದೃಷ್ಟಕರ. ಮೌನ ನಮ್ಮ ದೌರ್ಬಲ್ಯವಲ್ಲ. ಹಿಂದೆಯೇ ನಾವೆಲ್ಲ ಸೇರುತ್ತೇವೆ ಎಂದು ಹೇಳಿದ್ದೆವು. ಆದರೆ ಸಭೆ ನಡೆಸದಂತೆ ವಿಜಯೇಂದ್ರ ಸೂಚಿಸಿದ್ದರು.
ದಾವಣಗೆರೆ, ಚಿಕ್ಕೋಡಿ ಮತ್ತಿತರ ಕಡೆ ಪಕ್ಷದ ಸೋಲಿಗೆ ಯಡಿಯೂರಪ್ಪ ಅವರೇ ಕಾರಣ ಎಂದು ಪಕ್ಷ ನಿಷ್ಠೆ ಬಗ್ಗೆ ಮಾತನಾಡುವವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯಾಕೆ ಟಿಕೆಟ್ ಕೊಡಲಿಲ್ಲ? ಎಂದು ಪ್ರಶ್ನಿಸಿದರು.ಪಕ್ಷದ ಉಳಿವಿಗಾಗಿ ಮುಂದೆ ನಾವು ಸಭೆ ಮಾಡುತ್ತೇವೆ. ಪಕ್ಷದ ಪರವಾಗಿ ಮುಂದೆ ನಾವು ಸಭೆ ಸೇರುತ್ತೇವೆ. ಸಂಘ ಪರಿವಾರ, ಹೈಕಮಾಂಡ್ ಒಟ್ಟಾಗಿ ಹೋಗಿ ಅಂತಾ ಹೇಳಿದ್ದಾರೆ. ಶಾಸಕ ಬಿ.ಪಿ. ಹರೀಶ್ ರಾಜಕೀಯಕ್ಕೆ ಜನ್ಮ ಕೊಟ್ಟಿದ್ದು ಯಡಿಯೂರಪ್ಪ. ಇದನ್ನು ಅವರು ಮರೆಯಬಾರದು ಎಂದು ಕಿವಿ ಮಾತು ಹೇಳಿದರು. ಶಿಸ್ತುಕ್ರಮ ತೆಗೆದುಕೊಳ್ಳಿ
ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ಮಾತನಾಡಿ, ಪಕ್ಷದ ವಿರೋಧ ಚಟುವಟಿಕೆ ಮಾಡುವವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಪಾರ್ಟಿ ಬದಲಾವಣೆ ಮಾಡಿಕೊಂಡು ಬಂದವರು, ಬಿಜೆಪಿ ಬಗ್ಗೆ ನಿಯತ್ತು ಇಲ್ಲದೆ ಜೆಡಿಎಸ್‌ಗೆ ಹೋದವರೆಲ್ಲ ಯಡಿಯೂರಪ್ಪ ಬಗ್ಗೆ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಬೇರೆ ಪಕ್ಷ ಮಾಡಿದಾಗ ಬಿಜೆಪಿ ಪಕ್ಷ ನಡೆಸಲು ಇವರಿಗೆ ಆಗಲಿಲ್ಲ. ಪಕ್ಷ ಶಕ್ತಿ ಕಳೆದುಕೊಂಡಿತ್ತು. ಮತ್ತೆ ಯಡಿಯೂರಪ್ಪ ಬಂದರು ಪಕ್ಷಕ್ಕೆ ಅಧಿಕಾರ ಬಂತು. ಯಡಿಯೂರಪ್ಪ ಇನ್ನು ಶಕ್ತಿ ಉಳಿಸಿಕೊಂಡಿದ್ದಾರೆ ಎಂದರು. ವಿಜಯೇಂದ್ರ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಲ್ಲರನ್ನು ಪದಾಧಿಕಾರಿಗಳಾಗಿ ಮಾಡಲು ಸಾಧ್ಯವಿಲ್ಲ. ಪಕ್ಷದ ನಿಯಮಾನುಸಾರ ಯಾರನ್ನು ಮಾಡಲು ಸಾಧ್ಯವೋ ಅಂಥವರನ್ನು ಮಾಡುತ್ತಾರೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಟಿಕೆಟ್ ಸಿಕ್ಕಿಲ್ಲ. ಆದರೆ ಪಕ್ಷ ಹೇಳಿತು ನಾವು ಪಕ್ಷದ ಕೆಲಸ ಮಾಡಿದೆವು. ಇದು ಪಕ್ಷ ನಿಷ್ಠೆ ಎಂದು ಸಮರ್ಥಿಸಿಕೊಂಡರು. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.