ಚಿಕ್ಕಮಗಳೂರು: ಸಿ.ಟಿ.ರವಿಯವರು ನೀಡಿದ ‘ಸಿದ್ರಾಮುಲ್ಲಾ ಖಾನ್’ ಹೇಳಿಕೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ಸಿ.ಟಿ.ರವಿ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲುಯತ್ನಿಸಿದರು.
ಶನಿವಾರ ನಗರದ ತಾಲ್ಲೂಕು ಕಚೇರಿಯಿಂದ ಮೆರವಣಿಗೆ ಹೋರಟು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು
ಈ ವೇಳೆ ಪೊಲೀಸರು ರಸ್ತೆ ಮಧ್ಯೆಯಲ್ಲೇ ತಡೆದರು. ಸಿ.ಟಿ.ರವಿ ಮನೆ ರಸ್ತೆ ಮಧ್ಯೆಯೇ ಅಡ್ಡ ಹಾಕಿದ ಬಿಜೆಪಿ ಕಾರ್ಯಕರ್ತರು. ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಯ ಮತ್ತೊಂದು ಬದಿಯಲ್ಲಿ ಕಾಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Related Articles
ಇದನ್ನೂ ಓದಿ:ʼವರಾಹ ರೂಪಂʼ ವಿವಾದ: ಕೊನೆಗೂ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ ʼಕಾಂತಾರʼ
ಈ ವೇಳೆ ಪ್ರತಿಭಟನಕಾರರನ್ನು ನಿಯತ್ರಿಸುವಲ್ಲಿ ಪೊಲೀಸರು ಹರಸಾಹಸ ಪಟ್ಟರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಬೇಟಿ ನೀಡಿದರು. ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲು ಪೊಲೀಸರು ಮುಂದಾದರು. ನಮ್ಮನ್ನ ಏಕೆ ಬಂಧಿಸ್ತೀರಾ ಎಂದು ಪಟ್ಟು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರ ಜೊತೆ ಬಿಜೆಪಿ ಕಾರ್ಯಕರ್ತರ ವಾಕ್ಸಮರ ನಡೆಸಿದರು. ಪೊಲೀಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ನಡೆಯಿತು.
ಒಂದೆಡೆ ಕಾಂಗ್ರೆಸ್ ಮುಖಂಡರು, ಭಾಷಣ ಮಾಡುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಘೋಷಣೆ ಕೂಗುತ್ತಾ, ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆ ಮುತ್ತಿಗೆ ಹಾಕದಂತೆ ಪ್ರತಿರೋಧ ಒಡ್ಡಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು.