Advertisement

ಬಿಜೆಪಿ ಕಾರ್ಯಕರ್ತರ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆ

03:04 PM May 09, 2023 | Team Udayavani |

ಕನಕಪುರ: ತಾಲೂಕಿನಲ್ಲಿ ಚುನಾವಣಾ ಪ್ರಚಾರ ಮಾಡಲು ಹೊರಟ್ಟಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ಮಾಡಿ ಬೆದರಿಕೆ ಹಾಕಿರುವ ಮತ್ತೊಂದು ಪ್ರಕರಣ ನಡೆದಿದೆ.

Advertisement

ತಾಲೂಕಿನ ಕಸಬಾ ಹೋಬಳಿಯ ತುಂಗಣಿ ಗ್ರಾಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರು ಚುನಾವಣಾ ಪ್ರಚಾರ ಮತ್ತು ಮತಯಾಚನೆ ಮಾಡುವಾಗ ಬಿಜೆಪಿ ಮಹಿಳಾ ಕಾರ್ಯಕರ್ತರ ಪ್ರಚಾರ ಮಾಡಿದಂತೆ ಕೆಲ ಕಾಂಗ್ರೆಸ್‌ ಮುಖಂಡರು ತಡೆದು ಅಮಾನುಷವಾಗಿ ವರ್ತಿಸಿದ್ದ ಪ್ರಕರಣ ಮಾಸುವ ಮುನ್ನವೇ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್‌ ಮುಖಂಡರು ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಘಟನೆ ಖಂಡಿಸಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ.

ಡಿ.ಕೆ.ಶಿವಕುಮಾರ್‌ಗೆ ಟಕ್ಕರ್‌ ಕೊಡಲು ಬಿಜೆಪಿ ರಾಷ್ಟ್ರೀಯ ನಾಯಕರು ಕಂದಾಯ ಸಚಿವ ಆರ್‌.ಅಶೋಕ್‌ ಅವರನ್ನು ತಾಲೂಕಿನಲ್ಲಿ ಕಣಕ್ಕೆ ಇಳಿಸಿದ್ದಾರೆ. ತಾಲೂಕಿನಲ್ಲಿ ಈಗಾಗಲೇ ಡಿಕೆಶಿಯನ್ನು ಕಟ್ಟಿಹಾಕಲು ಬಿಜೆಪಿ ರಣತಂತ್ರವನ್ನು ರೂಪಿಸಿದೆ. ತಾಲೂಕಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಬಿರುಸುಗೊಂಡಿದೆ.

ಬಿಜೆಪಿ ಅಭ್ಯರ್ಥಿ ಆರ್‌.ಅಶೋಕ್‌ ಅವರ ಪರ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸ್ಟಾರ್‌ ಪ್ರಚಾರಕಿ ಶೃತಿ ಅಬ್ಬರದ ಪ್ರಚಾರ ನಡೆಸಿದ್ದು ಸಹಜವಾಗಿಯೇ ಕಾಂಗ್ರೆಸ್‌ ಪಾಳೆಯದ ಕಣ್ಣು ಕೆಂಪಗಾಗಿಸಿದೆ. ಕಳೆದ ನಾಲ್ಕು ದಿನಗಳ ಹಿಂದೆ ತುಂಗಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್‌ ಪರ ಚುನಾವಣಾ ಪ್ರಚಾರ ಮತ್ತು ಮತಯಾಚನೆ ಮಾಡುತ್ತಿದ್ದ ಮಹಿಳಾ ಕಾರ್ಯಕರ್ತರನ್ನು ಕಾಂಗ್ರೆಸ್‌ ಮುಖಂಡರು ಅಡ್ಡಗಟ್ಟಿ ಅಮಾನುಷವಾಗಿ ವರ್ತಿಸಿದ್ದರು. ಈ ಸಂಬಂಧ ದೂರು ಕೂಡ ದಾಖಲಾಗಿದೆ .

ಇದರ ಬೆನ್ನಲ್ಲೇ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ರೋಡ್‌ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕಿನ ಸಾತನೂರು ಹೋಬಳಿಯ ನೆಹರು ದೊಡ್ಡಿ ಗ್ರಾಮದ ಬಿಜೆಪಿ ಕಾರ್ಯಕರ್ತ ಚಂದ್ರು ರೋಡ್‌ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಗ್ರಾಮದಲ್ಲಿ ಪ್ರಚಾರ ನಡೆಸಲು ಪ್ರಚಾರದ ವಾಹನದ ಜೊತೆಗೆ ಹೋಗುವಾಗ ನೆಹರು ದೊಡ್ಡಿ ಸಮೀಪದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಮಹಾದೇವಿಯವರ ಸಹೋದರ ಮಹಾದೇವ ಮತ್ತು ಆತನ ಪತ್ನಿ ಸೇರಿದಂತೆ ಹಲವರು ಸೇರಿ ಬಿಜೆಪಿ ಕಾರ್ಯಕರ್ತ ಚಂದ್ರು ಅವರ ಮೇಲೆ ಮನಬಂದಂತೆ ಹಲ್ಲೆ ಮಾಡಿ ಗ್ರಾಮದಲ್ಲಿ ಪ್ರಚಾರ ನಡೆಸಿದಂತೆ ಬೆದರಿಕೆಯೂಡ್ಡಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದಾರೆ.

Advertisement

ಬಿಜೆಪಿ ಕಾರ್ಯಕರ್ತರ ಮೇಲೆ ಮೇಲಿಂದ ಮೇಲೆ ನಡೆದಿರುವ ಈ ಎರಡು ಘಟನೆಯಿಂದ ಸಹಜವಾಗಿಯೇ ಬಿಜೆಪಿ ಕಾರ್ಯಕರ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ತಾಲೂಕಿ ನಲ್ಲಿ ಪ್ರಚಾರ ನಡೆಸಲು ಬಿಜೆಪಿ ಕಾರ್ಯಕರ್ತರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ ಅಲ್ಲದೆ ಈ ಸಂಬಂಧ ಹಲ್ಲಿಗೊಳಗಾದ ಬಿಜೆಪಿ ಕಾರ್ಯಕರ್ತ ದೂರು ಕೊಡದಂತೆ ಕಾಂಗ್ರೆಸ್‌ ಮುಖಂಡರು ಬೆದರಿಕೆ ಒಡ್ಡಿದ್ದಾ ಎನ್ನಲಾಗಿದ್ದು ದೂರು ನೀಡಿದರೆ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಚಂದ್ರು ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next