Advertisement

Ajit Pawar-led NCP ಹೊರಹಾಕಲು ಬಿಜೆಪಿ-ಶಿಂಧೆ ಸೇನೆ ಯತ್ನ: ಸಂಜಯ್ ರಾವುತ್

09:32 PM Sep 23, 2024 | Team Udayavani |

ಮುಂಬಯಿ: ”ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಮಹಾಯುತಿ ಮೈತ್ರಿಯಿಂದ ಹೊರಹಾಕಲು ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ” ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ ”ಬಿಜೆಪಿ ಯೂಸ್ ಅಂಡ್ ಥ್ರೋ ತಂತ್ರವನ್ನು ಅನುಸರಿಸುತ್ತಿದೆ. ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಹೊರಹಾಕಲು ಬಿಜೆಪಿ ಮತ್ತು ಶಿಂಧೆ ನೇತೃತ್ವದ ಶಿವಸೇನೆ ವ್ಯವಸ್ಥಿತವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬಿಜೆಪಿಯ ಮುಂದಿನ ಗುರಿ ನಿಮ್ಮ ನೇತೃತ್ವದ ಶಿವಸೇನೆಯಾಗಿರಬಹುದು ಎಂಬುದನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು.

ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಎನ್‌ಸಿಪಿ(ಅಜಿತ್ ಪವಾರ್) ಪಕ್ಷಗಳು ರಾವುತ್ ಅವರ ಆರೋಪಗಳನ್ನು ತಳ್ಳಿಹಾಕಿದ್ದು, ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ನಾಯಕರು ಸೋಲಿನ ಭೀತಿಯಿಂದ ಅಭದ್ರತೆಯಿಂದ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಹೇಳಿವೆ.

ಎನ್‌ಸಿಪಿ(ಅಜಿತ್ ಪವಾರ್) ರಾಜ್ಯ ಘಟಕದ ಅಧ್ಯಕ್ಷ ಸುನೀಲ್ ತಟ್ಕರೆ ರಾವುತ್ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದು, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಏಕೀಕೃತ ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲಿವೆ. ಈ ವದಂತಿಗಳನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next