Advertisement
ಟಿಎಂಸಿಯ ಭದ್ರ ಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದಿದ್ದು, ಈ ವೇಳೆ ನಾಯಕರ ವಿರುದ್ಧ ಘೋಷಣೆ ಕೂಗಿರುವುದು ಮತ್ತು ಪ್ರಚಾರಕ್ಕೆ ಅಡ್ಡಿ ಪಡಿಸಿರುವ ಬಗ್ಗೆ ಆರೋಪಿಸಲಾಗಿದೆ.
Related Articles
Advertisement
ಸೆಪ್ಟೆಂಬರ್ 30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 3 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.ಕ್ಷೇತ್ರದೆಲ್ಲೆಡೆ ಬಿಗಿ ಪೋಲಿಸ್ ಭದ್ರತೆ ಕೈಗೊಳ್ಳಲಾಗಿದೆ .
2011 ಮತ್ತು 2016 ರಲ್ಲಿ ಮಮತಾ ಬ್ಯಾನರ್ಜಿ ಅವರು ಭಾವಾನಿಪುರ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು.
2021 ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ತನ್ನ ಮಾಜಿ ಆಪ್ತ, ಬಿಜೆಪಿ ಅಭ್ಯರ್ಥಿಯಾಗಿದ್ದ ಸುವೇಂದು ಅಧಿಕಾರಿ ವಿರುದ್ಧ ಸೋಲು ಅನುಭವಿಸಿದ ಕಾರಣ ಈ ಉಪ ಚುನಾವಣಾ ನಡೆಯುತ್ತಿದೆ. ಮಮತಾ ಅವರಿಗಾಗಿ ಟಿಎಂಸಿ ಶಾಸಕ ಶೋಭನ್ ದೇವ್ ಚಟ್ಟೋಪಾಧ್ಯಾಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.