Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಹಿತ ರಾಷ್ಟ್ರೀಯ ನಾಯಕರು ಚರ್ಚಿಸಿಯೇ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಹಾಗಿರುವಾಗ ವಿಜಯೇಂದ್ರ ಮತ್ತು ಮಾಜಿ ಸಿಎಂ ಬಿಎಸ್‌ವೈ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
ಯಾರೇ ಆದರೂ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಬಾರದು. ಸಮಸ್ಯೆಗಳಿದ್ದರೆ ಅಮಿತ್ ಶಾ, ರಾಜನಾಥ್ ಸಿಂಗ್ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತನಾಡಲಿ. ರಾಜ್ಯಾಧ್ಯಕ್ಷರ ವಿರುದ್ಧ ಮಾತನಾಡಿದರೆ ವರಿಷ್ಠರ ವಿರುದ್ಧ ಮಾತನಾಡಿದಂತೆಯೇ ಎಂದರು. ಸಿಎಂ ಸಿದ್ದರಾಮಯ್ಯ ಅವರು ಕೇಂದ್ರದ್ದು ಬುರುಡೆ ಸರಕಾರ ಎಂದು ಆರೋಪಿಸಿದ್ದಾರೆ. ಆದರೆ ಅವರ ಸರಕಾರದಲ್ಲಿ ಕಾಂಗ್ರೆಸ್‌ನವರಿಗೆ ಅಡುಗೆ ಅನಿಲ ಕೊಡುವ ಯೋಗ್ಯತೆಯೂ ಇರಲಿಲ್ಲ. ಮನೆ ಮನೆಗೆ ಅಡುಗೆ ಅನಿಲ ಸಿಗುವಂತೆ ಮಾಡುತ್ತಿರುವುದು ಮೋದಿ ಸರಕಾರವಾಗಿದ್ದು, ಒಟ್ಟು 4 ಕೋಟಿ ಮನೆಗಳಿಗೆ ಗ್ಯಾಸ್ ಸಂಪರ್ಕ ನೀಡಿದ್ದಾರೆ. ಆದರೂ ಸಿದ್ದರಾಮಯ್ಯ ತಮ್ಮ ಸರಕಾರದ ಲೋಪ ಮುಚ್ಚಿ ಹಾಕಲು ಕೇಂದ್ರದ ಬಗ್ಗೆ ಮಾತನಾಡುತ್ತಾರೆ ಎಂದರು.
Related Articles
Advertisement