ರನ್ನೇ ಆಶ್ರಯಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣ ವಾಗಬಹುದು ಎನ್ನಲಾಗುತ್ತಿದೆ.
Advertisement
ಪಕ್ಷ ನಿಭಾಯಿಸುವುದಕ್ಕೆ ವಿಜಯೇಂದ್ರರಿಗೆ “ಕಿರಿತನ’ವೇ ದೊಡ್ಡ ಸಮಸ್ಯೆಯಾಗಿದ್ದು, ಅನುಭವಿಗಳು ಹಾಗೂ ಹಿರಿಯರು ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಪದಾಧಿಕಾರಿ ಹಾಗೂ ಕೋರ್ ಕಮಿಟಿ ಸಮಿತಿ ಸದಸ್ಯರಾಗುವುದಕ್ಕೆ ಕಿರಿಕಿರಿ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ಪದಾಧಿಕಾರಿಗಳು, ಅದರಲ್ಲೂ ವಿಶೇಷವಾಗಿ ನಾಲ್ವರು ಪ್ರಧಾನ ಕಾರ್ಯದರ್ಶಿಗಳ ಹುದ್ದೆ ತೀರಾ ಆಯಕಟ್ಟಿನದ್ದಾಗಿದ್ದು, ಈ ಆಯ್ಕೆಗೆ ವಿಜಯೇಂದ್ರ ಯಾರಿಗೆ ಮಣೆ ಹಾಕಬಹುದೆಂಬ ಕುತೂಹಲ ಸೃಷ್ಟಿಯಾಗಿದೆ.
ಬಿಜೆಪಿ ಮೂಲಗಳ ಪ್ರಕಾರ ಪಂಚ ರಾಜ್ಯಗಳ ಚುನಾವಣ ಫಲಿತಾಂಶದ ಬಳಿಕ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ದಿಲ್ಲಿಯಲ್ಲಿ ಪಕ್ಷದ ಆಂತರಿಕ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.
Related Articles
ಲಭ್ಯ ಮಾಹಿತಿ ಪ್ರಕಾರ ಮೊದಲು ನಾಲ್ಕು ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯುವ ಸಾಧ್ಯತೆ ಇದೆ. ಒಬ್ಬ ಪ್ರಧಾನ ಕಾರ್ಯದರ್ಶಿಗೆ ತಲಾ ಎರಡು ವಿಭಾಗ ಹಾಗೂ ಎರಡು ಮೋರ್ಚಾಗಳ ಉಸ್ತುವಾರಿ ನೀಡುವ ಜತೆಗೆ ಪ್ರಮುಖ ನಿರ್ಧಾರಗಳ ಸಂದರ್ಭದಲ್ಲಿ ಅಧ್ಯಕ್ಷರು ಇವರ ಜತೆ ಚರ್ಚೆ ನಡೆಸಬೇಕಾಗುತ್ತದೆ. ಈ ಹುದ್ದೆಗೂ ಜಾತಿ ಸಮೀಕರಣ ನಡೆಸುವ ಸಾಧ್ಯತೆ ಇದ್ದು, ಬ್ರಾಹ್ಮಣ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಅಥವಾ ಪಂಗಡದ ಜತೆಗೆ ಇನ್ನೊಂದು ಸ್ಥಾನವನ್ನು ಉತ್ತರ ಕರ್ನಾಟಕ ಭಾಗದ ಲಿಂಗಾಯತರಿಗೆ ಬಿಟ್ಟುಕೊಡಬೇಕಾದ ಸನ್ನಿವೇಶ ನಿರ್ಮಾಣವಾಗಬಹುದು ಎಂದು ಹೇಳಲಾಗುತ್ತಿದೆ. ಎನ್.ರವಿಕುಮಾರ್ ಮಾತ್ರ ಎರಡು ಬಣದ ಪ್ರತಿನಿಧಿಯಾಗಿ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
Advertisement
ಹಿರಿಯ, ಪ್ರಬಲರ ನೇಮಕ ಸಾಧ್ಯತೆ ಹೆಚ್ಚುಈ ಬಾರಿ ಕೋರ್ ಕಮಿಟಿಗೆ ಹಿರಿಯ ಹಾಗೂ ಪ್ರಬಲರನ್ನು ನೇಮಕ ಮಾಡುವ ಸಾಧ್ಯತೆ ಹೆಚ್ಚಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್ ಅವರಿಗೆ ಜಾತಿ ಹಾಗೂ ಭವಿಷ್ಯದ ದೃಷ್ಟಿಯಿಂದ ಅವಕಾಶ ಕಲ್ಪಿಸುವುದು ಅನಿವಾರ್ಯವಾಗಬಹುದು. ವಿವಿಧ ಮೋರ್ಚಾಗಳಿಗೂ ಹಿರಿಯರನ್ನೇ ನೇಮಕ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು. ಲೋಕಸಭಾ ಚುನಾವಣೆ ಗೆಲ್ಲುವುದಕ್ಕಿಂತಲೂ ಪದಾಧಿಕಾರಿಗಳ ನೇಮಕ ಸಂದರ್ಭದಲ್ಲೇ ಬಿಜೆಪಿಯಲ್ಲಿ ನಿಜವಾದ ಸುಂಟರಗಾಳಿ ಬೀಸುವ ಸಾಧ್ಯತೆ ಇದೆ.