Advertisement

ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ನಿವೃತ್ತ IAS ಅಧಿಕಾರಿ ಅರವಿಂದ ಕುಮಾರ್‌ ಶರ್ಮಾ ನೇಮಕ

09:26 PM Jun 19, 2021 | Team Udayavani |

ನವದೆಹಲಿ/ಲಕ್ನೋ: ವಿಧಾನ ಪರಿಷತ್‌ ಸದಸ್ಯರಾಗಿರುವ ನಿವೃತ್ತ ಐಎಎಸ್‌ ಅಧಿಕಾರಿ, ಪ್ರಧಾನಿ ನರೇಂದ್ರ ಮೋದಿ ಆಪ್ತ ಅರವಿಂದ ಕುಮಾರ್‌ ಶರ್ಮಾರನ್ನು ಉತ್ತರ ಪ್ರದೇಶ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Advertisement

ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌ ಅವರು ಶನಿವಾರ ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ. ರಾಜ್ಯದಲ್ಲಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಹೇಳಲಾಗಿರುವ ಸಂಪುಟ ಪುನಾರಚನೆ ವೇಳೆ ಅವರಿ ಸ್ಥಾನವೂ ಸಿಗುವ ಸಾಧ್ಯತೆ ಇದೆ.

1988ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಶರ್ಮಾ, ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಸಿಎಂ ಕಚೇರಿಯಲ್ಲಿ ಅವರಿಗೆ ಕಾರ್ಯದರ್ಶಿಯಾಗಿದ್ದರು. 2014ರಲ್ಲಿ ಮೋದಿ ಪ್ರಧಾನಿಯಾದಾಗ ಪ್ರಧಾನಮಂತ್ರಿ ಕಚೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇರ್ಪಡೆಗೊಂಡಿದ್ದರು. ಅವರು ಉ.ಪ್ರ.ದ ಮೌ ಜಿಲ್ಲೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

21ಕ್ಕೆ ಸಂತೋಷ್‌ ಭೇಟಿ
ಕಳೆದ 15 ದಿನಗಳ ಹಿಂದಷ್ಟೇ ಲಕ್ನೋಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಲ್‌. ಸಂತೋಷ್‌, ಜೂ. 21ರಂದು ಲಕ್ನೋಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಉತ್ತರ ಪ್ರದೇಶ ರಾಜ್ಯ ಉಸ್ತುವಾರಿ ಹೊಂದಿರುವ ರಾಧಾ ಮೋಹನ್‌ ಸಿಂಗ್‌ ಅವರೂ ಸಂತೋಷ್‌ ಜೊತೆಗೆ ಆಗಮಿಸಲಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಪದಾಧಿಕಾರಿಗಳ ಜೊತೆಗೆ ಹಾಗೂ ಸ್ಥಳೀಯ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ :ಕೇವಲ ಐದು ನಿಮಿಷಗಳ ಅಂತರದಲ್ಲಿ ಮಹಿಳೆಗೆ ಎರಡು ಲಸಿಕೆ! ಲಸಿಕಾ ಕೇಂದ್ರದ ಸಿಬಂದಿಯ ಯಡವಟ್ಟು

Advertisement

ದಿಲ್ಲಿಗೆ ಸೊನೊವಾಲ್‌:
ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆಗೊಳ್ಳಲಿದೆ ಎಂಬ ವದಂತಿಗಳ ನಡುವೆಯೇ ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್‌, ದೆಹಲಿಗೆ ದೌಡಾಯಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಅವರು ನವದೆಹಲಿಗೆ ಭೇಟಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next