Advertisement

ನಾಲ್ಕು ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದ ಬಿಜೆಪಿ: ಕರ್ನಾಟಕದಲ್ಲಿ ಯಾವಾಗ?

03:33 PM Jul 04, 2023 | Team Udayavani |

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಿದೆ.

Advertisement

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ತೆಲಂಗಾಣ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಇಟಾಲ ರಾಜೇಂದರ್ ಅವರನ್ನು ನೇಮಕ ಮಾಡಲಾಗಿದೆ.

2024ರ ಲೋಕಸಭಾ ಚುನಾವಣೆ, ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಯಾವಾಗ?

Advertisement

ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಈಗಾಗಲೇ ಮುಗಿದಿದೆ. ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ರಾಜ್ಯಕ್ಕೆ ನೂತನ ಅಧ್ಯಕ್ಷರ ಆಯ್ಕೆಯಾಗಬೇಕಿದೆ. ಈಗಾಗಲೇ ಸೋಮಣ್ಣ ಸೇರಿ ಹಲವರು ಅಧ್ಯಕ್ಷ ಪಟ್ಟಕ್ಕೆ ಉತ್ಸುಕತೆ ತೋರಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಇದುವರೆಗೆ ಯಾರನ್ನೂ ಅಂತಿಮಗೊಳಿಸಿಲ್ಲ.

ಕರ್ನಾಟಕ ವಿಧಾನಸಭೆ ಅಧಿವೇಶನ ಆರಂಭವಾದರೂ ಇನ್ನೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಪಕ್ಷದ ವೀಕ್ಷಕರು ಬೆಂಗಳೂರಿಗೆ ಬಂದು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಮೊದಲು ವಿಪಕ್ಷ ನಾಯಕನ ನೇಮಕವಾಗಿ ಬಳಿಕ ರಾಜ್ಯಾಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next