ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿರುವ ಬಿಜೆಪಿ ನಾಲ್ಕು ರಾಜ್ಯಗಲ್ಲಿ ಗುರುವಾರ ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ. ದೆಹಲಿ, ಬಿಹಾರ, ರಾಜಸ್ಥಾನ ಮತ್ತು ಒಡಿಶಾ ದಲ್ಲಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ.
ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್ ಅವರನ್ನು ಅದರ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ, ಲೋಕಸಭೆ ಸಂಸದ ಸಿಪಿ ಜೋಶಿ ಅವರನ್ನು ರಾಜಸ್ಥಾನ ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿದೆ.ರಾಜಸ್ಥಾನದಲ್ಲಿ ಜೈಪುರದ ಅಂಬರ್ ಕ್ಷೇತ್ರದ ಶಾಸಕರಾಗಿರುವ ಸತೀಶ್ ಪೂನಿಯಾ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು.
ಬಿಹಾರಕ್ಕೆ, ಸಂಜಯ್ ಜೈಸ್ವಾಲ್ ಬದಲಿಗೆ ಬಿಹಾರ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಅವರನ್ನು ಹೊಸ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ಒಡಿಶಾ ಘಟಕದ ಅಧ್ಯಕ್ಷರಾಗಿ ಮಾಜಿ ರಾಜ್ಯ ಸಚಿವ, ತಳಮಟ್ಟದ OBC ನಾಯಕರಾಗಿರುವ ಮನಮೋಹನ್ ಸಮಾಲ್ ಅವರನ್ನು ನೇಮಕ ಮಾಡಲಾಗಿದೆ.