ಚಿಂಚೋಳಿ: ದೇಶದ ಸ್ವಾತಂತ್ರÂಕ್ಕಾಗಿ ಬಿಜೆಪಿ ಮುಖಂಡರು ಯಾವುದೇ ಹೋರಾಟ, ತ್ಯಾಗ, ಬಲಿದಾನ ಮಾಡಿರಲಿಲ್ಲ. ಹೀಗಾಗಿ ಅವರು ನಕಲಿ ದೇಶಭಕ್ತರು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ “ಬಲಿಷ್ಠ ಭಾರತಕ್ಕಾಗಿ ಅಮೃತ ನಡಿಗೆ’ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂದಿಗೂ ರಾಷ್ಟ್ರೀಯ ಧ್ವಜ ಹಾರಿಸಿಲ್ಲ. ಈಗ ದೇಶಭಕ್ತಿ ಬಗ್ಗೆ ಹೇಳಿಕೊಳ್ಳುತ್ತಿದೆ. ಗೋಡ್ಸೆ ದೇಶಭಕ್ತ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಕೆಂಪುಕೋಟೆ ಮೇಲೆ ಬಿಜೆಪಿ ಧ್ವಜ ಹಾರಿಸುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿಯ ಯಾವುದೇ ಮುಖಂಡರೂ ವಿರೋಧ ವ್ಯಕ್ತಪಡಿಸಿರಲಿಲ್ಲ. ಈಗ ಇವರಿಗೆ ದೇಶಪ್ರೇಮ ಉಕ್ಕಿ ಹರಿಯುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಬಸವಣ್ಣ ಮತ್ತು ಡಾ|ಬಿ.ಆರ್.ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಇಟ್ಟಿದೆ. ಕಲಬುರಗಿ ಸಂಸದ ಡಾ|ಉಮೇಶ ಜಾಧವ ಕಲಬುರಗಿ ಸಂಸದರಾಗಿ ಅಭಿವೃದ್ಧಿ ಮಾಡಲಿಲ್ಲ. ಹೀಗಾಗಿ ಅಭಿವೃದ್ಧಿ ಶೂನ್ಯವಾಗಿದೆ. ಬರುವ ಚುನಾವಣೆಯಲ್ಲಿ ಅಭಿವೃದ್ಧಿಗಾಗಿ ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ಅವರನ್ನು ಗೆಲ್ಲಿಸಿ ಎಂದು ಕೋರಿದರು.
ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ. ಸ್ವಾತಂತ್ರÂ ನಂತರ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದೆ. ಸ್ವಾಭಿಮಾನದ ಬದುಕು ನೀಡಿದೆ. ದೇಶ ಕಟ್ಟುವುದಕ್ಕಾಗಿ ಕಾಂಗ್ರೆಸ್ ಪಕ್ಷ ತ್ಯಾಗ ಮಾಡಿದೆ ಎಂದರು.
ಕಾಂಗ್ರೆಸ್ ಮುಖಂಡ ಸುಭಾಷ ರಾಠೊಡ ಮಾತನಾಡಿ, ಕಾಂಗ್ರೆಸ್ ಮುಕ್ತಮಾಡಲು ಯಾರಿಂದಲೂ ಸಾಧ್ಯ ವಿಲ್ಲ. 110ಕಿ.ಮೀ ಪಾದಯಾತ್ರೆಯಲ್ಲಿ ನನಗೆ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ಸ್ಫೂರ್ತಿ, ಚೈತನ್ಯ ನೀಡಿದ್ದಾರೆ ಎಂದರು.
ಶಿವಾನಂದ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ದೀಪಕನಾಗ ಪುಣ್ಯಶೆಟ್ಟಿ, ಮಧು ಸೂಧನರೆಡ್ಡಿ ಪಾಟೀಲ, ಪ್ರಭುಲಿಂಗ ಲೇವಡಿ, ಭೀಮರಾವ್, ಜಗದೇವ ಗುತ್ತೇದಾರ, ರವಿರಾಜ ಕೊರವಿ, ಬಸಯ್ಯ ರಾಠೊಡ, ಗುತ್ತೇದಾರ, ದೇವೇಂದ್ರಪ್ಪ ಸಾಲೋಳ್ಳಿ, ಗೋಪಾಲರಾವ್ ಕಟ್ಟಿಮನಿ, ಜಗನ್ನಾಥ ಕಟ್ಟಿ, ಬಾಸೀತ, ಶಬ್ಬೀರ ಅಹೆಮದ್, ಚೇತನ ಗೋನಾಯಕ ಇನ್ನಿತರರು ಇದ್ದರು.