Advertisement

Five State Election ದಿನಾಂಕದೊಂದಿಗೆ ಬಿಜೆಪಿ ವಿದಾಯ ಘೋಷಣೆಯಾಗಿದೆ: ಮಲ್ಲಿಕಾರ್ಜುನ ಖರ್ಗೆ

03:06 PM Oct 09, 2023 | Team Udayavani |

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಮೊದಲ ಪರೀಕ್ಷೆಯಂತಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸೋಮವಾರ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಅಯುಕ್ತ ರಾಜೀವ್ ಕುಮಾರ್ ಅವರು ಐದು ರಾಜ್ಯಗಳ ಚುನಾವಣೆಯ ದಿನಾಂಕ ಘೋಷಣೆ ಮಾಡಿದರು.

Advertisement

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನವೆಂಬರ್ 7ರಿಂದ 30ರವರೆಗೆ ಚುನಾವಣೆಗಳು ನಡೆಯಲಿದೆ. ಛತ್ತೀಸ್ ಗಢದಲ್ಲಿ ಮಾತ್ರ ಎರಡು ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಎಲ್ಲಾ ಐದು ರಾಜ್ಯಗಳ ಮತ ಎಣಿಕೆ ನಡೆಯಲಿದೆ.

ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,’ ಬಿಜೆಪಿಯ ವಿದಾಯವನ್ನು ಘೋಷಿಸಲಾಗಿದೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:World Cup 2023; ಪಾಕ್ ವಿರುದ್ಧ ಕೇಸರಿ ಜೆರ್ಸಿಯಲ್ಲಿ ಆಡುತ್ತಾ ಟೀಂ ಇಂಡಿಯಾ?

“ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗುವುದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯ ಕೂಡ ಘೋಷಿಸಲಾಗಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಪಕ್ಷವು ಶಕ್ತಿಯುತವಾಗಿ ಜನರ ಬಳಿಗೆ ಹೋಗಲಿದೆ. ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯು ಕಾಂಗ್ರೆಸ್ ಪಕ್ಷದ ಭರವಸೆಗಳು” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹಿಂದಿಯಲ್ಲಿ ಎಕ್ಸ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Advertisement

ರಾಜ್ಯದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಪ್ರತಿಪಾದಿಸಿದ್ದಾರೆ. “ನಾವು ಚುನಾವಣೆಗೆ ಸಿದ್ಧರಿದ್ದೇವೆ. ರಾಜಸ್ಥಾನದ ಜನರು ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ನಿರ್ಧರಿಸಿದ್ದಾರೆ” ಎಂದು ಅವರು ಸುದ್ದಿಸಂಸ್ಥೆ ಎಎನ್ಐ ಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next