Advertisement

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ; BJPಯಿಂದ ತೇಜಸ್ವಿನಿ ಅನಂತ್ ಕುಮಾರ್?

08:36 AM Mar 11, 2019 | Team Udayavani |

ಬೆಂಗಳೂರು:ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ನಡೆಯತೊಡಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರ ಲೋಕಸಭಾ ಕ್ಷೇತ್ರಕ್ಕೆ ದಿ.ಅನಂತ್ ಕುಮಾರ್ ಅವರ ಪತ್ನಿ ಡಾ.ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

Advertisement

ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದು, ಸತತ ಗೆಲುವು ಸಾಧಿಸುತ್ತಿದ್ದರು. ಇದೀಗ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ. ಈ ನಿಟ್ಟಿನಲ್ಲಿ  ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಯಾರನ್ನು ಅಖಾಡಕ್ಕಿಳಿಸಬೇಕು ಎಂಬ ಬಗ್ಗೆ ಕಾಂಗ್ರೆಸ್, ಬಿಜೆಪಿ ರಣತಂತ್ರ ರೂಪಿಸತೊಡಗಿವೆ.

ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಸೋಮವಾರ ಸಂಜೆ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರು ಹಾಗೂ ಕಾರ್ಪೋರೇಟರ್ ಗಳ ಜೊತೆ ಚರ್ಚೆ ನಡೆಸಿ, ಡಾ.ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಗೋವಿಂದರಾಜ ನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭ ನಗರ, ಬಿಟಿಎಂ ಲೇಔಟ್, ಜಯನನಗರ ಹಾಗೂ ಬೊಮ್ಮನಹಳ್ಳಿ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳಿವೆ.

ಸತತ ಗೆಲುವು ಸಾಧಿಸಿದ್ದ ಅನಂತ್ ಕುಮಾರ್:

Advertisement

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಆದರೆ 1989ರಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಬಳಿಕ 1996ರಿಂದ 2014ರವರೆಗೂ ಅನಂತ್ ಕುಮಾರ್ ಅವರು ಸತತವಾಗಿ 6 ಬಾರಿ ಜಯಭೇರಿ ಬಾರಿಸುವ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಬೆಂಗಳೂರು ದಕ್ಷಿಣ ಕ್ಷೇತ್ರದತ್ತ ಕಾಂಗ್ರೆಸ್ ಮತ್ತು ಬಿಜೆಪಿ ರಣತಂತ್ರ ರೂಪಿಸುವ ಮೂಲಕ ಲೋಕಸಮರಕ್ಕೆ ಸಜ್ಜಾಗುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next