Advertisement

ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ನಾಮಪತ್ರ ಸಲ್ಲಿಕೆ

01:04 PM Nov 23, 2021 | Team Udayavani |

ಕಲಬುರಗಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ‌ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾದ ವಿ.ವಿ.ಜ್ಯೋತ್ಸ್ನಾ ಅವರಿಗೆ ಬಿ.ಜಿ.ಪಾಟೀಲ ತಮ್ಮ ನಾಮಪತ್ರ ಸಲ್ಲಿಸಿದರು. ಈ ವೇಳೆ ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ, ಕೈಲಾಸ ಪಾಟೀಲ, ಲಕ್ಷ್ಮಿಕಾಂತ ಕುಲಕರ್ಣಿ ಸೇರಿ ನಾಲ್ವರು ಇದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬಿ.ಜಿ.ಪಾಟೀಲ, ಕಳೆದ ಆರು ವರ್ಷದಲ್ಲಿ ಉತ್ತಮ ಕೆಲಸ ಮಾಡಿದ್ದೇನೆ.‌ ಹೀಗಾಗಿ ಮತ್ತೊಮ್ಮೆ ಪಕ್ಷ ನನಗೆ ಟಿಕೆಟ್ ನೀಡಿದೆ.‌ ಈ ಬಾರಿ ಅಧಿಕ ಮತಗಳಿಂದ ಗೆಲುವು ವಿಶ್ವಾಸವೂ ಇದೆ ಎಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮತ್ತಷ್ಟು ಒತ್ತು ನೀಡಲಿದ್ದಾರೆ.  ಹೀಗಾಗಿ ಮತದಾರರು ಇನ್ನೊಮ್ಮೆ ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next