ಚಾಮರಾಜನಗರ: ಡಬಲ್ ಇಂಜಿನ್ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತೂಮ್ಮೆ ಬಿಜೆಪಿ ಬೆಂಬಲಿಸಿ ಎಂದು ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಸಿ.ಎಸ್. ನಿರಂಜನ್ ಕುಮಾರ್ ಮನವಿ ಮಾಡಿದರು.
ತಾಲೂಕಿನ ಮುಕ್ಕಡಹಳ್ಳಿ, ಕೆರೆಹಳ್ಳಿ, ಭುಜನಗಪುರ, ಕೀಳಲಿಪುರ, ಗೋವಿಂದವಾಡಿ ಪಂಚಾಯಿತಿಯ ಕಲ್ಪುರ, ಹಳೇಪುರ, ದೇಶಿಗೌಡನಪುರ ಗ್ರಾಮಗಳಲ್ಲಿ ಬೆಂಬಲಿಗರೊಂದಿಗೆ ಮತಯಾಚಿಸಿ ಮಾತನಾಡಿದರು.
ಕುಡಿಯುವ ನೀರು ಪೊರೈಕೆಗೆ ಆದ್ಯತೆ: ಹರವೆ ಭಾಗದ ಐದು ಪಂಚಾಯಿತಿಗಳು ಗುಂಡ್ಲುಪೇಟೆ ಕ್ಷೇತ್ರಕ್ಕೆ ಸೇರ್ಪಡೆಯಾಗಿದ್ದು, ಈ ಎಲ್ಲಾ ಗ್ರಾಮಗಳಿಗೆ ಸಾಕಷ್ಟು ಅಭಿವೃದ್ಧಿಪಡಿಸಲು ಅನುದಾನ ನೀಡಿದ್ದೇನೆ. ಕೆರೆಗಳಿಗೆ ನದಿ ಮೂಲಗಳಿಂದ ಕುಡಿಯುವ ನೀರು ಸರಬರಾಜು ಯೋಜನೆ, ಕುಡಿಯುವ ನೀರು ಪೊರೈಕೆಗೆ ಆದ್ಯತೆ, ಸಿಮೆಂಟ್ ರಸ್ತೆಗಳ ನಿರ್ಮಾಣ ಸೇರಿದಂತೆ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದೆ.
ಮತ್ತೂಮ್ಮೆ ಅವಕಾಶ ಕಲ್ಪಿಸಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿ ಜಾರಿಗೊಳಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದೇನೆ. ಮತ್ತೂಮ್ಮೆ ಅವಕಾಶ ಕಲ್ಪಿಸಿದರೆ ಇನ್ನು ಹೆಚ್ಚಿನ ಅಭಿವೃದ್ಧಿಪಡಿಸುವ ಮೂಲಕ ಗುಂಡ್ಲುಪೇಟೆ ಕ್ಷೇತ್ರವನ್ನು ಗುಡಿಸಲು ಮುಕ್ತ ಕ್ಷೇತ್ರ ಹಾಗೂ ರಾಜ್ಯಕ್ಕೆ ಮಾದರಿ ಕ್ಷೇತ್ರವನ್ನಾಗಿ ಮಾಡುವ ಮೂಲಕ ನಿಮ್ಮ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ ಎಂದರು.
ಬಿಜೆಪಿಗೆ ಸೇರ್ಪಡೆ: ಕೆರೆಹಳ್ಳಿ ಗ್ರಾಮದ ಲಿಂಗರಾಜು, ಶಿವಣ್ಣೇಗೌಡ, ರಾಜೇಶ್, ಪರಶಿವೇಗೌಡ, ರಾಜೇಶ್ ಮನವಿ, ನಾಗಯಾನಯಕ, ನಂಜುಂಡ ನಾಯಕ, ಮಾದನಾಯಕ ಸೇರಿದಂತೆ ಅನೇಕರು ಬಿಜೆಪಿಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಕಲ್ಪುರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್. ನಿರಂಜನ್‌ಕುಮಾರ್ ಅವರನ್ನು ಗ್ರಾಮಸ್ಥರು ಮಂಗಳ ವಾದ್ಯ ಸಮೇತ ಸ್ವಾಗತಿಸಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆರೆಹಳ್ಳಿ ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಮುಖಂಡರಾದ ಮಲೆಯೂರು ನಾಗೇಂದ್ರ ಡಿ.ಎಲ್ ಸುರೇಶ್, ಹರವೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್, ಮಹೇಂದ್ರ, ದೇಶಿಗೌಡನಪುರ ಪರಶಿವಮೂರ್ತಿ, ಯುವ ಬಿಜೆಪಿ ಅಧ್ಯಕ್ಷ ಪ್ರಣಯ್, ಮಹಿಳಾ ಬಿಜೆಪಿ ಅಧ್ಯಕ್ಷೆ ಕಮಲಮ್ಮ, ಸಚಿನ್‌ದೀಕ್ಷಿತ್, ವೃಷಬೇಂದ್ರ, ದೊರೆಸ್ವಾಮಿ ಮತ್ತಿತರರು ಇದ್ದರು.