Advertisement

Stable government ನೋಡಿ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ: ದಿನೇಶ್ ಗುಂಡೂರಾವ್

02:01 PM Sep 11, 2024 | Team Udayavani |

ಬೆಳಗಾವಿ: ”ಬಿಜೆಪಿ ಯವರಿಗೆ ಸ್ಥಿರ ಸರಕಾರ ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸರಕಾರ ಬೀಳಿಸುವದರಲ್ಲೇ ಹೆಚ್ಚು ಗಮನ ಹರಿಸುತ್ತಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ(ಸೆ11) ಕಿಡಿ ಕಾರಿದ್ದಾರೆ.

Advertisement

”ಸಿದ್ದರಾಮಯ್ಯ ನೇತೃತ್ವದ ಸರಕಾರವನ್ನು ಬೀಳಿಸಲು ಕೇಂದ್ರದ ಬಿಜೆಪಿ ನಾಯಕರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಹೀಗಾಗಿ ಬೇರೆಯವರು ಸಿಎಂ ರೇಸ್ ನಲ್ಲಿ ಎಂಬ ಪ್ರಶ್ನೆಯೇ ಬರುವುದಿಲ್ಲ. ಮುಡಾ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ವ್ಯತಿರಿಕ್ತ ತೀರ್ಪು ಬರುವುದಿಲ್ಲ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ಆರೋಗ್ಯ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಗುತ್ತಿಗೆ ಆಧಾರದ ಮೇಲೆ ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ತಜ್ಞ ವೈದ್ಯರು ಬರುತ್ತಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್ ಈ ಸಂದರ್ಭದಲ್ಲಿ ಹೇಳಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.