Advertisement
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರಿನಲ್ಲಿ ಶುಕ್ರವಾರ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು “ಕೈ ಬಿಟ್ಟ ಯೋಜನೆಗಳು, ಕೈ ಕೊಟ್ಟ ಕಾಂಗ್ರೆಸ್ ಸರಕಾರ’ ಎಂಬ ಹೆಸರಿನಲ್ಲಿ ಬಿಜೆಪಿ ಆರೋಪಪಟ್ಟಿ ಸಲ್ಲಿಸಿ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ ವಿರುದ್ಧ ನೀವು ಚೊಂಬಿನ ಜಾಹೀರಾತು ನೀಡಿರಬಹುದು. ಆದರೆ ಕರ್ನಾಟಕದ ಜನತೆಗೆ ಚೊಂಬಿನಷ್ಟು ಕುಡಿಯುವ ನೀರು ಇಲ್ಲದಂಥ ಪರಿಸ್ಥಿತಿ ಸೃಷ್ಟಿಸಿದ್ದೀರಿ ಎಂದು ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Advertisement
-ಕೃಷ್ಣೆಯ ಕಣ್ಣೀರು ಒರೆಸಲು 50 ಸಾವಿರ ಕೋಟಿ ರೂ. ಎಂದು 5 ರೂಪಾಯಿ ನೀಡಿಲ್ಲ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲೂ ಹಗರಣ ಮಾಡಲಾಗಿದೆ. ಭೂಮಿ, ಆಕಾಶ, ಪತ್ರಿಕಾ ರಂಗದಲ್ಲೂ ಕಾಂಗ್ರೆಸ್ ಲೂಟಿ ಮಾಡಿದೆ. ಜನರಿಗೆ ಒಂದು ಚೊಂಬು ನೀರು ಕೂಡ ನೀಡಿಲ್ಲ.
ಕಾಂಗ್ರೆಸ್ಸಿಗರೇ, ತಮಿಳುನಾಡಿಗೆ ನೀರು ಬಿಟ್ಟು ಕಾವೇರಿ ಮಾತೆಯ ತುಂಬಿದ ಕೊಡ ಬರಿದು ಮಾಡಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟವರು ನೀವು. ಬೆಳೆ ಒಣಗಿಸಿ ರೈತರಿಗೆ ಚೊಂಬು ಕೊಟ್ಟವರು ನೀವು. ಇದ್ದ ಬದ್ದ ಹಣವನ್ನೆಲ್ಲ ಖಾಲಿಮಾಡಿಕೊಂಡು ಪರಿಶಿಷ್ಟರ/ ಹಿಂದುಳಿದವರ ಕಲ್ಯಾಣಕ್ಕೆ ಮೀಸಲಾದ ಹಣವನ್ನೂ ವರ್ಗಾಯಿಸಿಕೊಂಡು ಶೋಷಿತರಿಗೆ ಚೊಂಬು ಕೊಟ್ಟವರು ನೀವು. ದೇಶದಲ್ಲಿ ಕಾಣದ “ಕೈ’ ಸ್ಥಿತಿ ತಲುಪುತ್ತಿರುವ ನಿಮಗೆ ಕೆಲವೇ ದಿನಗಳಲ್ಲಿ ಜನರೇ ನೀಡಲಿದ್ದಾರೆ ಖಾಲಿ ಚೊಂಬು.-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಕಾಂಗ್ರೆಸ್ ಮನಃಸ್ಥಿತಿಗೆ ತಕ್ಕಂತೆ ಜಾಹೀರಾತು: ರಾಘವೇಂದ್ರ
ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷವೇ ಇಲ್ಲ. ಅಪ್ಪಿತಪ್ಪಿ ಕರ್ನಾಟಕದಲ್ಲಿ ಅಧಿ ಕಾರಕ್ಕೆ ಬಂದಿದೆ. ಎಷ್ಟು ದಿನ ಇರುತ್ತೋ ಗೊತ್ತಿಲ್ಲ. ಜನರಿಗೆ ಆರಂಭದಿಂದಲೂ ಚೊಂಬನ್ನೇ ನೀಡುತ್ತಿರುವ ಕಾಂಗ್ರೆಸ್ ನಾಯಕರು ಅದಕ್ಕೆ ತಕ್ಕಂತೆ ಜಾಹೀರಾತು ನೀಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿ ಎದುರಾದಾಗೆಲ್ಲ ಕಾಂಗ್ರೆಸ್ ಇವಿಎಂ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತದೆ. ಕಾಂಗ್ರೆಸ್ ಆಕ್ಷೇಪದ ಬಗ್ಗೆ ಜನರಿಗೆ ಗೊತ್ತಿದೆ. ದೇಶದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಅಧಿ ಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಈ ಬಗ್ಗೆ ಅನುಮಾನ ಬೇಡ. ಶಿವಮೊಗ್ಗದಲ್ಲಿ ಒಂದು ಲಕ್ಷಕ್ಕೂ ಅಧಿ ಕ ಮತಗಳ ಮುನ್ನಡೆಯಿಂದ ಬಿಜೆಪಿ ಗೆಲ್ಲಲಿದೆ. ಈ ಬಾರಿ ಜೆಡಿಎಸ್ ಜತೆಗಿರುವ ಕಾರಣ ಶಕ್ತಿ ಹೆಚ್ಚಿದೆ. ಆ ಪಕ್ಷದ ಕುಮಾರಸ್ವಾಮಿ, ನಮ್ಮಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಎಲ್ಲರೂ ಸೇರಿ ಕೆಲಸ ಮಾಡುತ್ತಿದ್ದು, ನಮಗೆ ಲಾಭವಾಗಲಿದೆ ಎಂದರು.