Advertisement
ಬೆಳಗಾವಿ ಅಧಿವೇಶನದಲ್ಲಿ ಪಕ್ಷ ದಿಂದ ನಡೆಸಬೇಕಾದ ಹೋರಾಟಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಾಜಿ ಸಚಿವರಾದ ಡಾ| ಅಶ್ವತ್ಥನಾರಾಯಣ, ಸಿ.ಟಿ. ರವಿ, ಸುನಿಲ್ ಕುಮಾರ್, ಆರಗ ಜ್ಞಾನೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಆರ್. ಅಶೋಕ್, ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದರೆ ಮೇಲೆತ್ತಬಹುದು, ಆದರೆ ಗತಿಯೇ ಇಲ್ಲದ ದುಃಸ್ಥಿತಿಗೆ ತಲುಪಿದೆ. ನಮ್ಮ ಬಳಿ ಹೆಚ್ಚುವರಿ ಸಂಪನ್ಮೂಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಕ್ಕೆ ಹಣವಿಲ್ಲವಾಗಿದೆ.
Related Articles
Advertisement
ಇದು ಗುರುವಾರದ ಸರಕಾರ ರಾಜ್ಯದಲ್ಲಿ ಈಗ ಇರುವುದು “ಗುರುವಾರದ ಸರಕಾರ’. ಸಚಿವ ಸಂಪುಟ ಸಭೆ ನಡೆಯುವ ದಿನ ಮಾತ್ರ ಸಚಿವರು ವಿಧಾನಸೌಧಕ್ಕೆ ಬರುತ್ತಾರೆ. ಉಳಿದ ದಿನ ಇದ್ದಾರೋ, ಇಲ್ಲವೋ ಎಂಬುದೇ ಗೊತ್ತಾಗುವುದಿಲ್ಲ. ಸರಕಾರ ಜನರಿಂದ ದೂರವಾಗಿದೆ ಎಂದು ಅಶೋಕ್ ಟೀಕಿಸಿದರು. ವಿಪಕ್ಷದಲ್ಲಿ ಕಾಂಗ್ರೆಸ್ ಇದ್ದಾಗ ಕೋವಿಡ್ ಹಗರಣದ ಬಗ್ಗೆ ಮಾತನಾಡಲಿಲ್ಲ. ಈಗ ಮಾತ್ರ ಆ ಬಗ್ಗೆ ಮಾತನಾಡುತ್ತಿದೆ. ನಮ್ಮ ಅವಧಿ ಹಾಗೂ ಈಗಿನ 16 ತಿಂಗಳ ಅವಧಿಯ ಆಡಳಿತದ ಎಲ್ಲವನ್ನೂ ಸಿಬಿಐಗೆ ವಹಿಸಲಿ. ನಾವು ತನಿಖೆಗೆ ತಯಾರಿದ್ದೇವೆ ಎಂದು ಅಶೋಕ್ ಸವಾಲು ಹಾಕಿದರು.