ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
Advertisement
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾಗೆ ಕೋವಿಡ್ ಸೋಂಕು ದೃಢವಾಗಿದ್ದು, ಈ ಬಗ್ಗೆ ಸ್ವತಃ ನಡ್ಡಾ ಅವರೇ ಟ್ವೀಟರ್ ನಲ್ಲಿ ಸೋಂಕು ದೃಢವಾಗಿರುವ ಕುರಿತು ಸ್ಪಷ್ಟಪಡಿಸಿದ್ದಾರೆ. ಸೋಂಕಿನ ಪ್ರಾರಂಭಿಕ ಲಕ್ಷಣಗಳು ಕಾಣಿಸಿದಾಗ ಕೋವಿಡ್ ಪರೀಕ್ಷೆ ಮಾಡಿದ್ದು, ಬಳಿಕ ಸೋಂಕು ದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸದ್ಯ ನಡ್ಡಾ ಹೋಮ್ ಐಸೋಲೇಷನ್ ನಲ್ಲಿದ್ದಾರೆ. ತನ್ನೊಂದಿಗೆ ಕಳೆದ ಕೆಲ ದಿನಗಳಿಂದ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿ ಮಾಡಿದ್ದಾರೆ.
Related Articles
Advertisement