Advertisement

Stolen: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪತ್ನಿಗೆ ಸೇರಿದ ಕಾರು ಕಳ್ಳತನ

11:52 AM Mar 25, 2024 | Team Udayavani |

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿಗೆ ಸೇರಿದ ಕಾರು ಕಳ್ಳತನವಾಗಿರುವ ಘಟನೆ ದೆಹಲಿಯ ಗೋವಿಂದಪುರಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಮಾರ್ಚ್ 19 ರಂದು ಮಧ್ಯಾಹ್ನ 3 ರಿಂದ 4 ಗಂಟೆಯ ನಡುವೆ ಈ ಕಳ್ಳತನ ಕೃತ್ಯ ನಡೆದಿದೆ ಎಂದು ವರದಿ ತಿಳಿಸಿದೆ.

ಕಾರಿನ ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ವಾಹನವನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ಊಟ ಮಾಡಲು ನಿಲ್ಲಿಸಿದ್ದರು. ಈ ವೇಳೆ ಕಾರು ಕಳ್ಳತನವಾಗಿದೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.

ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಪತ್ತೆಯಾಗಿದೆ.ಆದರೆ ಇದುವರೆಗೆ ವಾಹನದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಕದ್ದ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಕಾರು ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next