Advertisement

ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ

05:29 PM Oct 15, 2021 | Team Udayavani |

ಪಣಜಿ: ನಾನು ಗೋವಾದ ಜನತೆಯನ್ನು ಭೇಟಿಯಾಗಲು ಬಂದಿದ್ದೇನೆ. ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರ ಸ್ಥಾಪಿಸಲು ಜನತೆ ನಮಗೆ ಯಾವಾಗಲೂ ಬೆಂಬಲ ನೀಡಿದ್ದಾರೆ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ನುಡಿದರು.

Advertisement

ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಣಜಿ ಸಮೀಪದ ತಾಲಿಗಾಂವನಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು- ಕೇಂದ್ರದಲ್ಲಿ ಮೋದಿಗೆ ಪೂರ್ಣ ಬಹುಮತದ ಸರ್ಕಾರವನ್ನು ನೀಡಿದ ನಂತರ ಕಲಂ 370 ರದ್ಧುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಕೋವಿಡ್ ಹೊಡೆದೋಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ರಣನೀತಿಯ ಅನುಸಾರ ಹೆಜ್ಜೆ ಇಡಲಾಯಿತು. ಗೋವಾದಲ್ಲಿ ಶೇ 100 ರಷ್ಟು ಕೋವಿಡ್ ಲಸಿಕೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸರ್ಕಾರ ಉತ್ತಮ ಕಾರ್ಯ ನಿರ್ವಹಿಸಿದೆಎಂದರು.

ಗೋವಾದಲ್ಲಿ ಸಂಪೂರ್ಣ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಅಗತ್ಯವಿದೆ. ರಾಜ್ಯದಲ್ಲಿ ಜಿ.ಪಂ ಹಾಗೂ ಮಹಾನಗರ ಪಾಲಿಕಾ ಚುನಾವಣೆಗಳಲ್ಲಿಯೂ ಬಿಜೆಪಿಗೆ ಯಶಸ್ಸು ಲಭಿಸಿದೆ. ಇದೀಗ ವಿಧಾನಸಭಾ ಚುನಾವಣೆಯೊಂದೇ ಬಾಕಿ ಉಳಿದಿದೆ. ಮನೋಹರ್ ಪರೀಕರ್ ರವರನ್ನು ನೆನಪಿಸಿಕೊಳ್ಳದ ಹೊರತು ಗೋವಾದ ಕಲ್ಪನೆಯನ್ನು ನಾನು ಮಾಡಲು ಸಾಧ್ಯವಿಲ್ಲ. ಕೇಂದ್ರ ರಕ್ಷಣಾ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಪರೀಕರ್ ರವರು ನಮ್ಮ ಯೋಧರನ್ನು ಸನ್ಮಾನಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಒನ್ ರ್ಯಾಂಕ್ ಒನ್ ಪೆಂಶನ್ ಮಹತ್ವದ ನಿರ್ಣಯ ತೆಗೆದುಕೊಂಡರು. ಇಷ್ಟೇ ಅಲ್ಲದೆಯೇ ಮೋದಿಯವರ ನೇತೃತ್ವದಲ್ಲಿ ಸರ್ಜಿಕಲ್ ಸ್ಟ್ರೈಕ್ ಮೂಲಕ ಉಗ್ರರಿಗೆ ತಕ್ಕ ಉತ್ತರ ನೀಡಿದ್ದರು ಎಂದು ಅಮಿತ್ ಶಾ ನುಡಿದರು.

ಇದನ್ನೂ ಓದಿ: ಕಾಲಮಿತಿಯಲ್ಲಿ ಸಾಲ ಸೌಲಭ್ಯ ಒದಗಿಸಿ

ಗೋವಾದಲ್ಲಿ ಸದ್ಯ ವಿಧಾನಸಭಾ ಚುನಾವಣೆ ಆಗಮಿಸುತ್ತಿರುವುದರಿಂದ ವಾರ್ಷಿಕ ಪರೀಕ್ಷೆಯ ಸಂದರ್ಭ ಬಂದಿದೆ. ಗೋವಾದಲ್ಲಿ ಪೂರ್ಣ ಬಹುಮತದ ಸರ್ಕಾರ ಸ್ಥಾಪಿಸಲು ನಾವು ಸಂಕಲ್ಪ ಮಾಡಿದ್ದೇವೆ. ಜನತೆ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಗೋವಾ ಬಿಜೆಪಿ ಪ್ರಭಾರಿ ಸಿ.ಟಿ ರವಿ, ಬಿಜೆಪಿ ಚುನಾವಣಾ ಪ್ರಭಾರಿ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಕೇಂದ್ರ ಸಚಿವ ಶ್ರೀಪಾದ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next