Advertisement

ದಲಿತ ಸಮುದಾಯದ ಉನ್ನತಿಗೆ ಬಿಜೆಪಿ ಬದ್ಧ

01:10 PM Sep 08, 2021 | Team Udayavani |

ಬೆಂಗಳೂರು: ದಲಿತ ಸಮುದಾಯದ ಉನ್ನತಿ ಮತ್ತು ಪ್ರಗತಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ. ಎಸ್‌ಸಿ ಸಮುದಾಯದ ದುಡಿಯುವ ಕೈಗಳಿಗೆ ಉದ್ಯೋಗ ನೀಡಲಾಗುವುದು. ದಲಿತರ ಅಭಿವೃದ್ಧಿಗೆ ಬಿಜೆಪಿಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Advertisement

ಇದನ್ನೂ ಓದಿ:ಡ್ರಗ್ಸ್ ಕೇಸಿನಲ್ಲಿ ಎಷ್ಟೇ ಪ್ರಭಾವಿಯಾದರೂ ಕಠಿಣ ಕ್ರಮ‌ ಖಚಿತ : ಅರಗ ಜ್ಞಾನೇಂದ್ರ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೇರೆ ಸರಕಾರಗಳು ಅವರ ಜೀವನದಲ್ಲಿ ಬೆಳಕು ಕಾಣುವಂಥ ಕಾರ್ಯಗಳನ್ನು ಮಾಡಿಲ್ಲ. ಸಣ್ಣ ಪುಟ್ಟ ಆಸೆಗಳನ್ನು ಹುಟ್ಟಿಸಿ ಅವರು ಬೆಳೆಯಲು ಅವಕಾಶ ನೀಡಿಲ್ಲ. ಕೇವಲ ಮತಬ್ಯಾಂಕ್‌ ಆಗಿ ಅವರನ್ನು ಬಳಸಿಕೊಂಡಿದೆ.

ಆದರೆ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರವು ದಲಿತ ಸಮುದಾಯದ ಉನ್ನತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ವಿವರಿಸಿದರು. ದಲಿತರಿಗೆ ಮತ್ತು ಎಸ್ಸಿ ಸಮುದಾಯಕ್ಕೆ ಇರುವ ವಿವಿಧ ಯೋಜನೆಗಳ ಮಾಹಿತಿ ನೀಡಿದ ಸಚಿವರು, ಅವುಗಳ ಕುರಿತು ರಾಜ್ಯ ಎಸ್ಸಿ ಮೋರ್ಚಾವು ಜನರಿಗೆ ತಿಳಿಸಬೇಕೆಂದು ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಪರಿಶಿಷ್ಟ ಜಾತಿಯವರಿಗೆ ಕುರಿತ ಸಮಸ್ಯೆಗಳನ್ನು ಅವರು ಆಲಿಸಿದರು. ಹರಿಯಾಣ ಸರ್ಕಾರದ ಮಾದರಿಯಲ್ಲಿ ನಿರುದ್ಯೋಗ ಭತ್ಯೆ ಕೊಡಬೇಕೆಂದು ಛಲವಾದಿ ನಾರಾಯಣಸ್ವಾಮಿ ಅವರು ವಿನಂತಿಸಿದರು. ಅದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.

Advertisement

ದಲಿತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 25 ಲಕ್ಷ ರೂಪಾಯಿ ಸಾಲ ನೀಡಬೇಕು. ಜಮೀನು ವಿಚಾರದಲ್ಲಿ ಹೆಚ್ಚು ಧನಸಹಾಯ ನೀಡಬೇಕು. ಗಂಗಾಕಲ್ಯಾಣ ಯೋಜನೆಗೆ ಒತ್ತುಕೊಡಬೇಕು. ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದರು.ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ಹೇಳಿದರು.

ಪಕ್ಷದ ಎಸ್‌ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ವಕ್ತಾರರಾದ ಛಲವಾದಿ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ, ಎಸ್ಸಿ ಮೋರ್ಚಾದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next