Advertisement

ಸಿಎಂ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

10:52 PM Apr 09, 2019 | Team Udayavani |

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ವೇಳೆ ಸ್ವೀಕರಿಸಿದ್ದ ಗೌಪ್ಯತೆ ಪ್ರಮಾಣವನ್ನು ಹಲವು ಬಾರಿ ಉಲ್ಲಂ ಸಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.

Advertisement

ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ನೇತೃತ್ವದಲ್ಲಿ ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಹವಕ್ತಾರ ಎ.ಎಚ್‌. ಆನಂದ್‌ ಇತರರನ್ನು ಒಳಗೊಂಡ ನಿಯೋಗ ಮಂಗಳವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು.

ಬಳಿಕ ಪ್ರತಿಕ್ರಿಯಿಸಿದ ರಾಜೀವ್‌ ಚಂದ್ರಶೇಖರ್‌, ಮುಖ್ಯಮಂತ್ರಿಗಳು ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಒಂದು ದಿನ ಮೊದಲೇ ಮಾಹಿತಿ ಬಹಿರಂಗಪಡಿಸಿದ್ದಾರೆ.

ಜತೆಗೆ ಸಂಪುಟದ ಬಹುತೇಕ ಸಚಿವರೊಂದಿಗೆ ಆದಾಯ ತೆರಿಗೆ ಇಲಾಖೆ ಎದುರು ಪ್ರತಿಭಟನೆ ನಡೆಸುವ ಮೂಲಕ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ದೇಶದ ಒಕ್ಕೂಟ ವ್ಯವಸ್ಥೆಗೆ ಚ್ಯುತಿ ತಂದಿದ್ದಾರೆ ಎಂದು ಹೇಳಿದರು.

ದೇಶದ ಭದ್ರತೆ ವಿಚಾರದಲ್ಲೂ ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಪುಲ್ವಾಮಾ ದಾಳಿ, ಸರ್ಜಿಕಲ್‌ ಸ್ಟ್ರೈಕ್‌ ನಡೆಯುತ್ತದೆ ಎಂಬುದು ತಮಗೆ ಎರಡು ವರ್ಷಗಳ ಹಿಂದೆಯೇ ಗೊತ್ತಿತ್ತು. ಈ ವಿಷಯವನ್ನು ಸೇನಾಧಿಕಾರಿಯೊಬ್ಬರು ತಮಗೆ ತಿಳಿಸಿದ್ದರು ಎಂಬುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಆ ಮೂಲಕ ದೇಶದ ರಕ್ಷಣೆ ವಿಚಾರದಲ್ಲೂ ಗೌಪ್ಯತೆ ಉಲ್ಲಂ ಸಿದ್ದಾರೆ. ಗೌಪ್ಯತೆ ಪ್ರಮಾಣ ವಚನ ಉಲ್ಲಂ ಸಿರುವ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ದೂರಿನ ಪ್ರತಿಯನ್ನು ಶೀಘ್ರವೇ ಕೇಂದ್ರ ಗೃಹ ಇಲಾಖೆಗೆ ಕಳುಹಿಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಮಾತನಾಡಿ, ಪುಲ್ವಾಮಾ ದಾಳಿ, ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಮೊದಲೇ ಗೊತ್ತಿತ್ತು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ದೇಶಕ್ಕೆ ದ್ರೋಹ ಬಗೆಯುವ ಕೆಲಸ ಮಾಡಿದ್ದಾರೆ. ಪಾಕಿಸ್ತಾನ ಪರ ವಕಾಲತ್ತು ವಹಿಸುವಂತೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಇಂತಹ ಹೇಳಿಕೆ ನೀಡುವುದು ಖಂಡನೀಯ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next