ನವದೆಹಲಿ:ಪಶ್ಚಿಮಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಬಹುದು ಇಲ್ಲವೇ ಅತಂತ್ರ ಫಲಿತಾಂಶ ಬರಬಹುದು ಎಂದು ಮತಗಟ್ಟೆ ಸಮೀಕ್ಷೆ ವರದಿ ಬಂದ ನಂತರವೂ ಭಾರತೀಯ ಜನತಾ ಪಕ್ಷ ಪಶ್ಚಿಮಬಂಗಾಳದಲ್ಲಿ ತಮ್ಮ ಪಕ್ಷವೇ ಅಧಿಕಾರಕ್ಕೆ ಏರಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕೆಲವೊಂದು ಸಮಸ್ಯೆಗಳು ಕಂಡುಬಂದು ಬೇಸರವಾದೀತು!
200ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ, ಮತಗಟ್ಟೆ ಸಮೀಕ್ಷೆಯಲ್ಲಿ ಏನೇ ಅಂಕಿಅಂಶ ಬರಲಿ, ಪಶ್ಚಿಮಬಂಗಾಳದಲ್ಲಿ ಬಿಜೆಪಿ 200ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವ ಮತಗಟ್ಟೆ ಸಮೀಕ್ಷೆಯೂ ಪಶ್ಚಿಮಬಂಗಾಳದಲ್ಲಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದನ್ನು ಹೇಳಿಲ್ಲ. ಮೇ 2ರಂದು ಫಲಿತಾಂಶ ಬರಲಿ, ಆಗ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮಾಲ್ವಿಯಾ ತಿಳಿಸಿರುವುದಾಗಿ ವರದಿ ಹೇಳಿದೆ.
ಮತಗಟ್ಟೆ ಸಮೀಕ್ಷೆಯನ್ನು ಫಲಿತಾಂಶ ಎಂದು ಪರಿಗಣಿಸುವುದಿಲ್ಲ. ಪಶ್ಚಿಮಬಂಗಾಳದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಲಿದೆ. ಮಮತಾ ಬ್ಯಾನರ್ಜಿ ಕೇಂದ್ರ ಸರಕಾರದ ವಿರುದ್ಧ ಜಿದ್ದಿಗೆ ಬಿದ್ದ ಪರಿಣಾಮ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ವಂಚಿಸಿದ್ದಾರೆ. ಈ ಬಾರಿ ಮಮತಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದ್ದಾರೆ. ನಾವು ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೋಪಾಲ್ ಕೃಷ್ಣ
ಅಗರ್ವಾಲ್ ತಿಳಿಸಿದ್ದಾರೆ.