Advertisement

ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಕಾಪು ಕ್ಷೇತ್ರ ಬಿಜೆಪಿ

07:42 PM Dec 14, 2021 | Team Udayavani |

ಕಾಪು: ನನ್ನ ಮೇಲೆ ಭರವಸೆಯಿಟ್ಟು ಪಕ್ಷ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರಿಗೆ ಯಾವುದೇ ರೀತಿಯಲ್ಲಿ ಆಮಿಷವೊಡ್ಡದೇ, ಈ ಕ್ಷೇತ್ರವನ್ನು ಗೆದ್ದಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷರು ನೀಡಿರುವ ಭರವಸೆಯಂತೆ ಪೂರ್ಣ ಬಹುಮತದೊಂದಿಗೆ, ಹಣಕಾಸಿನ ಖರ್ಚಿಲ್ಲದೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ನಾವು ಎಣಿಸಿದ್ದಕ್ಕಿಂತಲೂ ಹೆಚ್ಚಿನ ಮತಗಳು ದೊರಕಿವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸತತ ನಾಲ್ಕನೇ ಬಾರಿ ಮೇಲ್ಮನೆ ಸದಸ್ಯರಾಗಿ ಆಯ್ಕೆಯಾಗಿ ಪ್ರಥಮ ಬಾರಿಗೆ ಕಾಪು ಕ್ಷೇತ್ರ ಬಿಜೆಪಿ ಕಛೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಕಾಪು ಕ್ಷೇತ್ರ ಬಿಜೆಪಿ ವತಿಯಿಂದ ಏರ್ಪಡಿಸಲಾದ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.

ಬೈಂದೂರಿನಿಂದ ಸುಳ್ಯದವರೆಗೆ ಪಕ್ಷ ನಡೆಸಿರುವ ಸಿದ್ಧತೆ, ಚುನಾವಣಾ ಪೂರ್ವಭಾವಿಯಾಗಿ ನಡೆದಿರುವ ಪ್ರಾತ್ಯಕ್ಷಿಕೆ, ಸಂಘಟನಾತ್ಮಕವಾಗಿ ನಾವು ನಡೆಸಿರುವ ಶ್ರಮಫಲ ನೀಡಿದ್ದು, ಅದಕ್ಕಾಗಿ ಪಕ್ಷದ ಮುಖಂಡರು, ಜನಪ್ರತನಿಧಿಗಳು, ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.

ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದಿರುವ ಚುನಾವಣೆಯಲ್ಲಿ ಹನ್ನೆರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮೇಲ್ಮನೆಯಲ್ಲಿ ಬಹುಮತ ಗಳಿಸಿದೆ. ಕೆಳಮನೆಯಲ್ಲಿ ಮಂಜೂರಾಗಿ ಬರುವ ಮತಾಂತರ ನಿಷೇಧ ಕಾಯ್ದೆ ಮಸೂದೆ ಸೇರಿದಂತೆ ಎಲ್ಲಾ ಕಾಯಿದೆಗಳನ್ನು ಮೇಲ್ಮನೆಯಲ್ಲಿ ಸಮರ್ಪಕವಾಗಿ ಅಂಗೀಕರಿಸಲು ಈ ಬಹುಮತ ಅನುಕೂಲವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next