Advertisement

ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್‌ ಮೈತ್ರಿ ಸರ್ಕಾರ: ಡಿಕೆ ಶಿವಕುಮಾರ್

11:50 AM Nov 05, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಕೇವಲ ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್‌ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಆರ್‌.ಆರ್‌.ನಗರದಲ್ಲಿ ಮುನಿರತ್ನ ಗೆದ್ದರೆ ಕೇವಲ ಇಂಧನ ಖಾತೆ ಯಾಕೆ, ಮುಖ್ಯಮಂತ್ರಿ ಸ್ಥಾನವನ್ನೇ ಪಡೆಯಲಿ. ಇದು ಕೇವಲ ಬಿಜೆಪಿ ಸರ್ಕಾರ ಅಲ್ಲ, ಕಾಂಗ್ರೆಸ್‌ ಬಿಜೆಪಿ ಸರ್ಕಾರ. ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಹತ್ತು ಟೇಕ್‌ ತಗೊಳ್ಳಲು ಸಿನಿಮಾ ಮಾಡುತ್ತಿಲ್ಲ. ಅವರ ರೀತಿ ಕಟ್‌ ಅಂಡ್‌ ಪೇಸ್ಟ್‌ ಮಾಡುವುದಿಲ್ಲ ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸದಿರುವುದು, ಜನಪರ ಕೆಲಸ ಮಾಡದೇ ಇರುವುದು ಹಾಗೂ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದಿಲ್ಲ. ಬೆಂಗಳೂರಿನಲ್ಲಿ ವಾಸ ಮಾಡುತ್ತಿರುವ ವಿದ್ಯಾವಂತ ಮತದಾರರು ಈ ರಾಜಕೀಯ ವಿದ್ಯಮಾನಗಳನ್ನು ನೋಡಿ, ಯಾವ ಕಾರಣಕ್ಕೆ ಮತ ಹಾಕಬೇಕು ಎಂದು ಬೇಸರಗೊಂಡಿದ್ದಾರೆ. ಮತ ಹಾಕಿ ಎಂದು ಮುಖ್ಯಮಂತ್ರಿಗಳು ಹಾಗೂ ಇತರರು ಮನವಿ ಮಾಡಿದ್ದರು. ಆದರೆ, ಅವರಿಗೆ ಮತ ಹಾಕಲು ಇಚ್ಛೆ ಇಲ್ಲದಿರುವ ಕಾರಣ ಮತಗಟ್ಟೆಗೆ ಬಂದಿಲ್ಲ ಎಂದರು.

ಇದನ್ನೂ ಓದಿ:ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಸಿಬಿಐ ವಶಕ್ಕೆ

ಚುನಾವಣಾ ಆಯೋಗ ನಾವು ಕೊಟ್ಟ ಮಾಹಿತಿಗೆ ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ತಕ್ಕಮಟ್ಟಿಗೆ ಕಾರ್ಯಪ್ರವೃತ್ತರಾಗಿದ್ದರು. ಪೊಲೀಸರ ದುರಾಡಳಿತ, ಅಧಿಕಾರಿಗಳ ದುರ್ಬಳಕೆ, ಅಕ್ರಮ ವಿಚಾರವಾಗಿ ನಾವು ಕೊಟ್ಟ ದೂರಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದ್ದಾರೆ. ಅದರ ಪರಿಣಾಮ ಏನಾಯಿತು ಎಂಬುದು ಗೊತ್ತಿಲ್ಲ ಎಂದು ಹೇಳಿದರು.

Advertisement

ಸಚಿವ ಸ್ಥಾನದ ಬಗ್ಗೆ ಈಗ ಏನೂ ಹೇಳುವುದಿಲ್ಲ: ಮುನಿರತ್ನ

ಸಚಿವ ಸ್ಥಾನದ ಬಗ್ಗೆ ನಾನು ಈಗಲೇ ಏನೂ ಹೇಳುವುದಿಲ್ಲ. ಅದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಿರಿತನದ ಆಧಾರದಲ್ಲಿ 50,000 ಮತಗಳ ಅಂತರದಿಂದ ಗೆಲ್ಲುವುದಾಗಿ ಹೇಳ್ದಿದಾರೆ. ನಾನು ಮತದಾರರಲ್ಲಿ ಮತ ಭಿಕ್ಷೆ ಕೇಳಿದ್ದೇನೆ. ಎಷ್ಟು ಮತಗಳಿಂದ ಗೆಲ್ಲುತ್ತೇನೆ ಎಂದು ಈಗ ಹೇಳುವುದಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೊಟ್ಟ ಮಾತು ತಪ್ಪುವುದಿಲ್ಲ. ಇದು ಸೂರ್ಯ, ಚಂದ್ರರಿರುವವರೆಗೆ ಸತ್ಯ. ಆ ಮಾತಿನ ಪ್ರಕಾರ ಈಗಾಗಲೇ ಎಲ್ಲರನ್ನೂ ಸಚಿವರನ್ನಾಗಿ ಮಾಡಿದ್ದಾರೆ. ಕೊಟ್ಟ ಮಾತಿನಂತೆ ಮಂತ್ರಿ ಮಾಡುವುದು ನನ್ನ ಕರ್ತವ್ಯ ಎಂಬುದಾಗಿಯೂ ಹೆಳಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next