Advertisement

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

02:11 AM Apr 30, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದಕ್ಕೆ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಚುನಾವಣ ಆಯೋಗ ನೋಟಿಸ್‌ ನೀಡಿತ್ತು. ಇದೀಗ ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಎರಡೂ ಪಕ್ಷಗಳು ಆಯೋಗದಿಂದ ಕಲಾವಕಾಶ ಕೋರಿವೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಅವರಿಂದ ನಿಯಮ ಉಲ್ಲಂಘನೆಯಾಗಿದ್ದಕ್ಕೆ ಸಂಬಂಧಿ ಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ನೋಟಿಸ್‌ ನೀಡಲಾಗಿತ್ತು. ಇದಕ್ಕೆ ಬಿಜೆಪಿ 1 ವಾರ ಕಾಲವಕಾಶ ಕೋರಿದೆ. ಅದೇ ರೀತಿ ರಾಹುಲ್‌ ಮತ್ತು ಖರ್ಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೂ ನೋಟಿಸ್‌ ನೀಡಲಾಗಿದ್ದು, ಪ್ರತಿಕ್ರಿ ಯೆಗೆ ಕಾಂಗ್ರೆಸ್‌ಗೆ 14 ದಿನಗಳ ಸಮಯ ಕೋರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next