Advertisement

ಸಾರ್ವಕರ್ ಭಾವಚಿತ್ರಕ್ಕೆ ಬೆಂಕಿ: ಧಾರವಾಡದಲ್ಲಿ ಬಿಜೆಪಿ- ಕಾಂಗ್ರೆಸ್ ಜಟಾಪಟಿ

01:51 PM Aug 20, 2022 | Team Udayavani |

ಹುಬ್ಬಳ್ಳಿ: ಧಾರವಾಡದಲ್ಲಿ ಕಾಂಗ್ರೆಸ್ ನವರು ಸಾರ್ವಕರ್ ಭಾವಚಿತ್ರ ಸುಟ್ಟಿರುವುದನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾದಾಗ ಎರಡು ಪಕ್ಷಗಳ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು. ಎರಡು ಕಡೆಯವರನ್ನು ನಿಯಂತ್ರಿಸಲು ಪೊಲೀಸರು ಬೆವರಿಳಿಸಬೇಕಾಯಿತು.

Advertisement

ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾದಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಪ್ರತಿಭಟನೆಗೆ ಮುಂದಾದರು.ಬಿಜೆಪಿಯವರು ಜೈ ಮೋದಿ ಎಂದು ಕೂಗಿದರೆ, ಕಾಂಗ್ರಸ್ಸಿಗರು ಜೈ ಕಾಂಗ್ರೆಸ್ ಎಂದು ಕೂಗಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಕಚೇರಿಗೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಿದರು.

ಈ ಹಂತದಲ್ಲಿ ಎರಡು ಕಡೆ ಘೋಷಣೆ ತೀವ್ರಗೊಂಡಿತು. ಪರಿಸ್ಥಿತಿ ಕೈ ಮೀರುವುದು ಮನಗಂಡು ಪೊಲೀಸರು ತಡೆಗೆ ಮುಂದಾದಾಗ ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಕೊನೆಗೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋದರು.

Advertisement

Udayavani is now on Telegram. Click here to join our channel and stay updated with the latest news.

Next