Advertisement

ಪ್ರಧಾನಿಗೆ ಸ್ವಾಗತಿಸದ ತೆಲಂಗಾಣ ಸಿಎಂ ವಿರುದ್ಧ ಕಾಂಗ್ರೆಸ್ ಕೂಡ ಆಕ್ರೋಶ

02:16 PM Feb 06, 2022 | Team Udayavani |

ಹೈದರಾಬಾದ್ : ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳದಿದ್ದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಬಿಜೆಪಿ ಮಾತ್ರವಲ್ಲದೆ ಕಾಂಗ್ರೆಸ್ ಕೂಡ ತರಾಟೆಗೆ ತೆಗೆದುಕೊಂಡಿವೆ.

Advertisement

ಪರಿಸ್ಥಿತಿ ದುರದೃಷ್ಟಕರ ಎಂದು ಬಣ್ಣಿಸಿರುವ ಬಿಜೆಪಿ ಮುಖಂಡ ಪ್ರಕಾಶ್ ರೆಡ್ಡಿ, ಮುಖ್ಯಮಂತ್ರಿಯವರ ನಿರ್ಧಾರ ರಾಜ್ಯದ ರಾಜಕೀಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಲಿದೆ.  ಕ್ಷಮೆಯಾಚಿಸುವಂತೆ ಮತ್ತು ಪ್ರಧಾನ ಮಂತ್ರಿಯೊಂದಿಗೆ ಮಾತುಕತೆ ನಡೆಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಸ್ವಾಗತಿಸದೆ ಚಂದ್ರಶೇಖರ್ ರಾವ್ ಅವರು “ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ, ಮುಖ್ಯಮಂತ್ರಿ ಹೊಸ ಕೆಳಮಟ್ಟಕ್ಕೆ ಕುಸಿದಿದ್ದಾರೆ. ಇದು ನಾಚಿಕೆಗೇಡಿನ ಕೃತ್ಯ” ಎಂದು ಬಿಜೆಪಿ ಬಣ್ಣಿಸಿದೆ.

“ವಿರೋಧ ಪಕ್ಷದ ನಾಯಕನಾಗಿ, ಅವರು ಭಾರತದ ಸಂವಿಧಾನವನ್ನು ಬದಲಾಯಿಸಲು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ಸಂವಿಧಾನವನ್ನು ನಿರ್ಲಕ್ಷಿಸಲು ಬಯಸುತ್ತಾರೆ, ಅವರು ಪ್ರೋಟೋಕಾಲ್ ಗ ಳನ್ನು ಉಲ್ಲಂಘಿಸುತ್ತಿದ್ದಾರೆ, ಅವರು ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

ಇದು ಪ್ರಜಾಸತ್ತಾತ್ಮಕ ರಾಷ್ಟ್ರ, ಸಂವಿಧಾನಕ್ಕೆ ವಿರುದ್ಧವಾದ ಯಾವುದೇ ಚಟುವಟಿಕೆಗೆ ನಾನು ವಿರೋಧಿಯಾಗಿದ್ದೇನೆ ಎಂದು ಅವರು ಹೇಳಿದರು.

Advertisement

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೈದರಾಬಾದ್‌ಗೆ ಆಗಮಿಸಿ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ಅನಾವರಣ ಮಾಡಿದ್ದರು.

ಏತನ್ಮಧ್ಯೆ, ಕಾಂಗ್ರೆಸ್ ನಾಯಕ ವಿ ಹನುಮಂತ ರಾವ್ ಕೂಡ ಘಟನೆಯನ್ನು ಭಾರತದ ಸಂವಿಧಾನದ ವಿರುದ್ಧ ಎಂದು ಖಂಡಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಕಳೆದ ತಿಂಗಳು ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳ ಅನಾವರಣಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿದಾಗ ಭಟಿಂಡಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಅವರನ್ನು ಬರಮಾಡಿಕೊಂಡಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next