Advertisement

ಮಂಗಳೂರು: ವಿಜಯೋತ್ಸವದಲ್ಲಿ ಕೈ -ಬಿಜೆಪಿ ನಾಯಕರು! ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ

06:59 PM Dec 30, 2020 | Team Udayavani |

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಎಣಿಕೆ ಕಾರ್ಯ ಎಂಜಿಸಿ ಮತ ಎಣಿಕಾ ಕೇಂದ್ರದಲ್ಲಿ ನಡೆಯುತ್ತಿದ್ದು ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸ್ಥಳದಲ್ಲಿದ್ದು ಕಾರ್ಯಕರ್ತರ ವಿಜಯೋತ್ಸವದಲ್ಲಿ ಭಾಗಿಯಾಗಿದ್ದಾರೆ.

Advertisement

ಸಂಭ್ರಮಾಚರಣೆಯ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಎದುರಾಗಿದ್ದರೆ, ಈ ಸಂದರ್ಭ ಮಧ್ಯ ಪ್ರವೇಶಿಸಿದ ಪೊಲೀಸರು ಕಾರ್ಯಕರ್ತರನ್ನು ಸ್ಥಳದಿಂದ ದೂರ ಸರಿಯಲು ಹೇಳಿದ್ದಾರೆ ಈ ನಡುವೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಾಗೂ ಪೋಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದ ಪರಿಣಾಮ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next