Advertisement

ದೇಣಿಗೆ ವಿವರ ಸಲ್ಲಿಸದ ಬಿಜೆಪಿ, ಕಾಂಗ್ರೆಸ್‌

11:58 PM Jun 04, 2019 | Team Udayavani |

ನವದೆಹಲಿ: ವಿವಿಧ ರಾಜಕೀಯ ಪಕ್ಷಗಳು, ಚುನಾವಣಾ ಬಾಂಡ್‌ಗಳ ಮೂಲಕ ಪಡೆದಿರುವ ದೇಣಿಗೆಯ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಗಡುವು ಮುಗಿದಿದ್ದರೂ ಬಿಜೆಪಿ, ಕಾಂಗ್ರೆಸ್‌, ಡಿಎಂಕೆ ಹಾಗೂ ಇನ್ನಿತರ ಪಕ್ಷಗಳು ವಿವರಗ‌ಳನ್ನು ಚುನಾವಣಾ ಆಯೋಗಕ್ಕೆ ಇನ್ನೂ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.

Advertisement

ಕೇಂದ್ರ ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳನ್ನು ಉದ್ದೇಶಿಸಿ
ಏ. 12ರಂದು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್‌, ಚುನಾವಣಾ ಬಾಂಡ್‌ಗಳ ಮೂಲಕ ಪಕ್ಷಗಳು ಪಡೆದಿರುವ ದೇಣಿಗೆಗಳ ವಿವರಣೆಯನ್ನು ಮುಚ್ಚಿದ ಲಕೋಟೆಯಲ್ಲಿ ಮೇ 30ರೊಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶ ಪಾಲಿಸುವಂತೆ ಆಯೋಗವೂ ಎಲ್ಲಾ ಪಕ್ಷಗಳಿಗೆ ಸೂಚಿಸಿತ್ತು. ಇಷ್ಟಾದರೂ, ಪಕ್ಷಗಳು ಮಾರ್ಗಸೂಚಿ ಪಾಲಿಸಿಲ್ಲ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next