Advertisement
ಕೇಂದ್ರ ಸರಕಾರ ಕಳೆದ ಹತ್ತು ವರ್ಷಗಳಲ್ಲಿ ಐಟಿ, ಇಡಿ, ಸಿಬಿಐ ಬಳಸಿ 443 ವಿಪಕ್ಷದ ಶಾಸಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿದೆ. ಹಲವಾರು ಭ್ರಷ್ಟಾಚಾರ ಪ್ರಕರಣಗಳಿಂದ ಬೇಸತ್ತ ರಾಜ್ಯದ ಜನತೆ ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದರು. ಈಗ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ರಾಜ್ಯಪಾಲರು ಒಂದು ಅರ್ಜಿಯನ್ನು ಪಡೆಯುವಾಗ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಆದರೆ ರಾಜ್ಯಪಾಲರ ಕ್ರಮದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದು ಕರಾಳ ದಿನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ತಿಳಿಸಿದ್ದಾರೆ.
ಮೂಡುಬಿದಿರೆ: ಅಧಿಕಾರಕ್ಕಾಗಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುವಲ್ಲಿ ಇತಿಹಾಸ ನಿರ್ಮಿಸಿರುವ ಬಿಜೆಪಿಯವರು ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಪದಚ್ಯುತಿಗಾಗಿ ಆಟ ಆಡುತ್ತಿದ್ದಾರೆ. ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ನತ್ತ ಹೆಜ್ಜೆ ಹಾಕಲಿದ್ದಾರೆ. ಅವರ ಹೋರಾಟಕ್ಕೆ ಕಾಂಗ್ರೆಸ್ ನೈತಿಕ ಬೆಂಬಲ ನೀಡುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಕೆ. ಅಭಯಚಂದ್ರ ತಿಳಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ಖಂಡಿತ ಅವರಿಗೆ ಗೆಲುವಾಗುವ ನಿರೀಕ್ಷೆ ಇದೆ ಎಂದವರು ಅಭಿಪ್ರಾಯಪಟ್ಟರು.