ನವದೆಹಲಿ: 2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು 44 ಕ್ಷೇತ್ರಕ್ಕೆ ಸೀಮಿತಗೊಳಿಸಿದ ಬಿಜೆಪಿ ಈ ಬಾರಿ ಇನ್ನೂ ಒಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿಯೇ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಈ ಬಾರಿ 437 ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿತ್ತು.
1980ರ ಜನಸಂಘ ಬಿಜೆಪಿ ಪಕ್ಷವಾಗಿ ಚುನಾವಣೆಗಳಲ್ಲಿ ಸ್ಪರ್ಧಿಸಲು ಆರಂಭಿಸಿದ ನಂತರ ಮೊತ್ತ ಮೊದಲ ಬಾರಿಗೆ 545 ಲೋಕಸಭಾ ಕ್ಷೇತ್ರಗಳ ಪೈಕಿ 437 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಈ ನಿಟ್ಟಿನಲ್ಲಿ ದೇಶದ ರಾಜಕೀಯರಂಗದಲ್ಲಿ ಭಾರತೀಯ ಜನತಾ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಹೆಚ್ಚು ಜನಪ್ರಿಯವಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ವರದಿ ವಿವರಿಸಿದೆ.
ಇನ್ನೊಂದೆ ಕಾಂಗ್ರೆಸ್ ಈ ಬಾರಿ 423 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿತ್ತು, ಉತ್ತರ ಪ್ರದೇಶದ ಕೆಲವೇ ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುವುದು ಬಾಕಿ
ಇದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಬಿಜೆಪಿಯನ್ನು ಈ ವಿಚಾರದಲ್ಲಿ ಕಾಂಗ್ರೆಸ್ ಮೀರಿಸಲಾಗದು. 2014ರಲ್ಲಿ 464 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕಿಳಿದಿತ್ತು. ಆದರೆ ಗೆದ್ದಿದ್ದು ಕೇವಲ 44 ಸೀಟ್‌ಗಳು. 2009ರಲ್ಲಿ ಬಿಜೆಪಿ 433 ಹಾಗೂ ಕಾಂಗ್ರೆಸ್ 444, 2004ರಲ್ಲಿ ಬಿಎಪಿ 364 ಹಾಗೂ ಕಾಂಗ್ರೆಸ್ 414 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು.