Advertisement

26ಕ್ಕೆ ಡೆಲ್ಲಿಯಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆ

08:45 AM Aug 23, 2017 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ ಆ.26ರಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ ನಡೆಯಲಿದ್ದು, ಪಕ್ಷದ ರಾಜ್ಯ ನಾಯಕರಿಗೆ ಮತ್ತೂಂದು ಸುತ್ತಿನ ಬಿಸಿ ಮುಟ್ಟಲಿದೆ. ಇತ್ತೀಚೆಗೆ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ನಾಯಕರಿಗೆ ವಹಿಸಿರುವ ಕಾರ್ಯಭಾರಗಳು ಮತ್ತು ಅದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಈ ಸಭೆ ಕರೆಯಲಾಗಿದೆ.

Advertisement

ಸೆಪ್ಟೆಂಬರ್‌ ಅಂತ್ಯಕ್ಕೆ ಮತ್ತೆ ಅಮಿತ್‌ ಶಾ ರಾಜ್ಯಕ್ಕೆ ಬರಲಿದ್ದು, ಅಷ್ಟರೊಳಗೆ ಪಕ್ಷವನ್ನು ಮುಂಬರುವ ವಿಧಾನಸಭೆ ಚುನಾವಣೆಗೆ ಸಂಪೂರ್ಣ ಸಿದಟಛಿಗೊಳಿಸುವ ಬಗ್ಗೆ ರೂಪಿಸಬೇಖಾದ ಕಾರ್ಯತಂತ್ರಗಳು, ಅಭ್ಯರ್ಥಿ ಗಳ ಆಯ್ಕೆ ಬಗ್ಗೆಯೂ ಗಮನ ಹರಿಸಬೇಕಾಗಿದೆ. ಅಮಿತ್‌ ಶಾ ಬೆಂಗಳೂರಿಗೆ ಬಂದು ಸರಣಿ ಸಭೆಗಳನ್ನು ನಡೆಸಿದ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ನಾಯಕರಿಗೆ ಕೆಲವು ಕಾರ್ಯಭಾರಗಳನ್ನು ವಹಿಸಿದ್ದರು. ಬಳಿಕ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮತ್ತು ಯಡಿಯೂರಪ್ಪ ಅವರ
ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ ನಡೆಸಿದ ಮುಖಂಡರು, ಅಮಿತ್‌ ಶಾರವರ ನಿರ್ದೇಶನದಂತೆ ಪಕ್ಷ ಸಂಘಟನೆ ಕುರಿತು ಕೆಲವೊಂದು ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲಾ ವರದಿಗಳನ್ನು ಅಮಿತ್‌ ಶಾ ಅವರಿಗೆ ನೀಡಬೇಕಾಗಿದ್ದು, ಅದಕ್ಕಾಗಿ ದೆಹಲಿಯಲ್ಲಿ ಅವರ ನೇತೃತ್ವದಲ್ಲೇ ಕೋರ್‌ ಕಮಿಟಿ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ: ಅಮಿತ್‌ ಶಾ ಈಗಾಗಲೇ ಪಕ್ಷದ ರಾಜ್ಯ ಘಟಕವನ್ನು ತಮ್ಮ ಹಿಡಿತಕ್ಕೆ ತೆಗೆದು
ಕೊಂಡಿರುವುದರಿಂದ ಮುಂದಿನ ಎಲ್ಲಾ ತೀರ್ಮಾನಗಳು ಶಾ ಸಮ್ಮುಖದಲ್ಲೇ ಆಗಬೇಕಾಗಿದೆ. ಹಾಗಾಗಿ ಪಕ್ಷವನ್ನು
ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದು ಮತ್ತು ರಾಜ್ಯ ಸರ್ಕಾರದ ವಿರುದಟಛಿ ಯಾವ ರೀತಿ ಹೋರಾಟದ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಶಾ ಅವರ ಕಟ್ಟುನಿಟ್ಟಿನ ಸೂಚನೆ ಬಳಿಕ ಎಚ್ಚೆತ್ತ ಬಿಜೆಪಿ, ಸರ್ಕಾರದ ಭ್ರಷ್ಟಾಚಾರದ ವಿರುದಟಛಿ ಹೋರಾಟ ಆರಂಭಿಸುತ್ತಿದ್ದಂತೆ ಯಡಿಯೂರಪ್ಪ ಅವರ ವಿರುದಟಛಿ ಎಸಿಬಿಯಲ್ಲಿ ಡಿನೋಟಿμಕೇಷನ್‌ ದೂರು ದಾಖಲಾಗಿರುವುದನ್ನೂ ಅಮಿತ್‌ ಶಾ ಅವರ ಗಮನಕ್ಕೆ ತರಲಾಗುವುದು ಎಂದು ಕೋರ್‌ ಕಮಿಟಿ ಸದಸ್ಯರೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next