ನವದೆಹಲಿ: ಈಶಾನ್ಯದ ಮೂರು ರಾಜ್ಯಗಳಾದ ಮೇಘಾಲಯ, ತ್ರಿಪುರಾ ಮತ್ತು ನಾಗಾಲ್ಯಾಂಡ್ ನಲ್ಲಿ ಮತಎಣಿಕೆ ಮುಂದುವರಿದಿದ್ದು, ಸದ್ಯದ ಅಂಕಿ ಅಂಶದ ಪ್ರಕಾರ, ತ್ರಿಪುರಾದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ.
ಇದನ್ನೂ ಓದಿ:ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ
60 ಸದಸ್ಯ ಬಲದ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಮೈತ್ರಿಕೂಟ 33 ಸ್ಥಾನಗಳಲ್ಲಿ, ಎಡಪಕ್ಷಗಳ ಮೈತ್ರಿಕೂಟ 16 ಸ್ಥಾನಗಳಲ್ಲಿ ಹಾಗೂ ಟಿಐಪಿಆರ್ ಎ 11 ಸ್ಥಾನಗಳಲ್ಲಿ ಜಯ ಗಳಿಸಿದೆ.
ಫೆಬ್ರುವರಿ 16ರಂದು ತ್ರಿಪುರಾ ವಿಧಾನಸಭೆಗೆ ಒಂದು ಹಂತದಲ್ಲಿ ಚುನಾವಣೆ ನಡೆದಿತ್ತು. ವರದಿಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 28.14 ಲಕ್ಷ ಮತದಾರರಿದ್ದು, ಚುನಾವಣೆಯಲ್ಲಿ 24.66 ಲಕ್ಷಕ್ಕೂ ಅಧಿಕ ಮತದಾರರು ಮತ ಚಲಾಯಿಸಿದ್ದರು.
ಈ ಚುನಾವಣೆಯಲ್ಲಿ ಮೊದಲ ಬಾರಿಗೆ ರಾಜವಂಶಸ್ಥ ಪ್ರದ್ಯೋತ್ ಮಾಣಿಕ್ಯ ದೆಬ್ಬಾರ್ಮಾ ತಿರ್ಪಾ ಮೋಥಾ ತ್ರಿಪುರಾ ಚುನಾವಣೆಯಲ್ಲಿ ಬಿಜೆಪಿಗೆ ಸಡ್ಡು ಹೊಡೆದು ಸ್ಪರ್ಧಿಸಿದ್ದು, 11 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.