Advertisement

ಬಿಜೆಪಿ ಸೋಲಿಸುವುದೇ ಅಜೆಂಡಾ: ಸಿದ್ದರಾಮಯ್ಯ 

01:00 AM Jan 26, 2019 | |

ಚುನಾವಣೆಯ ಸೀಟು ಹೊಂದಾಣಿಕೆಯ ಬಗ್ಗೆ ಈಗಾಗಲೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದಲ್ಲಿ ಮಾತುಕತೆ ನಡೆದಿದೆ. ಯಾವ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎಂಬುದನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ ಕುಟುಂಬದ ಹೆಮ್ಮೆಯ ಕುಡಿ ಪ್ರಿಯಾಂಕಾ ಗಾಂಧಿ ಯವರಿಗೆ ಪಕ್ಷ ಜವಾಬ್ದಾರಿಯ ಹುದ್ದೆ ನೀಡಿದೆ. ಪ್ರಿಯಾಂಕಾ ಅವರ ಆಗಮನ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸಾಧನೆ ಮಾಡಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಕ್ಷೇತ್ರಗಳಲ್ಲಿ ಮೈತ್ರಿ ಹೊಂದಾಣಿಕೆಗಿಂತಲೂ ಬಿಜೆಪಿ ಸೋಲಿಸುವುದೇ ಮುಖ್ಯ ಗುರಿಯಾಗಿದೆ ಎಂದರು.

ಲೋಕಸಭೆ ಚುನಾವಣೆಗೆ ದಾವಣಗೆರೆ ಮಾತ್ರವಲ್ಲ, ಯಾವುದೇ
ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ.
● ಸಿದ್ದರಾಮಯ್ಯ, ಮಾಜಿ ಸಿಎಂ

Advertisement

Udayavani is now on Telegram. Click here to join our channel and stay updated with the latest news.

Next