Advertisement

14 ತಿಂಗಳ ಬಳಿಕ ಬಿಡುಗಡೆ: ಮೆಹಬೂಬಾ ಮುಫ್ತಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಬಿಜೆಪಿ

04:22 PM Oct 24, 2020 | Nagendra Trasi |

ನವದೆಹಲಿ: ಭಾರತದ ತ್ರಿವರ್ಣ ಧ್ವಜದ ಕುರಿತು ಪಿಡಿಪಿ ಮುಖ್ಯಸ್ಥೆ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿಕೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸುವಂತೆ ಜಮ್ಮು-ಕಾಶ್ಮೀರದ ಬಿಜೆಪಿ ಘಟಕ ಒತ್ತಾಯಿಸಿದೆ.

Advertisement

ಕಳೆದ ವರ್ಷ ಆಗಸ್ಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರ ಮೆಹಬೂಬಾ ಮುಫ್ತಿಯನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ಸುಮಾರು 14 ತಿಂಗಳ ಬಳಿಕ ಬಿಡುಗಡೆಗೊಂಡ ನಂತರ ಮುಫ್ತಿ ಸುದ್ದಿಗಾರರ ಜತೆ ಮಾತನಾಡುತ್ತ, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮರು ಜಾರಿಯಾದ ನಂತರವೇ ರಾಷ್ಟ್ರಧ್ವಜವನ್ನು ಹಾರಿಸುವುದಾಗಿ ಹೇಳಿಕೆ ನೀಡಿದ್ದರು.

ಎಲ್ಲಿಯವರೆಗೆ ನಮ್ಮ ಧ್ವಜ ನಮಗೆ ಮರಳಿ ಸಿಗುವುದಿಲ್ಲವೋ, ಅಲ್ಲಿಯವರೆಗೆ ಬೇರೆ ಯಾವುದೇ ಧ್ವಜ ಹಾರಿಸುವುದಿಲ್ಲ ಎಂದು ಮುಫ್ತಿ ಹೇಳಿದ್ದರು. ಈ ಬಗ್ಗೆ ಭಾರತೀಯ ಜನತಾ ಪಕ್ಷ ಮುಫ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಮೆಹಬೂಬಾ ಮುಫ್ತಿ ನೀಡಿರುವ ಹೇಳಿಕೆಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಬಿಜೆಪಿ ಲೆಫ್ಟಿನೆಂಟ್ ಗವರ್ನರ್ ಮನೋನ್ ಸಿನ್ನಾ ಅವರಿಗೆ ಮನವಿ ಮಾಡಿಕೊಂಡಿದೆ. ಮೆಹಬೂಬಾ ಮುಫ್ತಿ ಅವರ ದೇಶದ್ರೋಹದ ಹೇಳಿಕೆಯನ್ನು ಗಮನಿಸುವಂತೆ ನಾನು ಗವರ್ನರ್ ಗೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಅಲ್ಲದೇ ಆಕೆ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಜಮ್ಮು-ಕಾಶ್ಮೀರದ ಅಧ್ಯಕ್ಷ ರವೀಂದರ್ ರೈನಾ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next