Advertisement
ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತೆರಿಗೆ ವಂಚನೆ ಸಂಬಂಧ ಹಲವು ಪ್ರಕರಣ ದಾಖಲಾಗಿವೆೆ. ತೆರಿಗೆ ಅಧಿಕಾರಿಗಳು ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂ. ವಶಪಡಿಸಿಕೊಂಡಿದ್ದಾರೆ. ಡಿ. ಕೆ. ಶಿವಕುಮಾರ್ ಮತ್ತು ರಾಜ್ಯದ ಮೈತ್ರಿ ಸರಕಾರದ ಸಚಿವರ ವಿರುದ್ಧ ಬಂದಿರುವ ಆರೋಪದ ಕುರಿತು ರಾಹುಲ್ ಗಾಂಧಿ ಕಠಿನ ಕ್ರಮ ತೆಗೆದುಕೊಳ್ಳಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಸುರೇಶ್ ಕುಮಾರ್ ಆಗ್ರಹಿಸಿದರು.
ಸಮ್ಮಿಶ್ರ ಸರಕಾರದಲ್ಲಿ ಹೊಡಿಬಡಿ ರಾಜಕೀಯ ಹೆಚ್ಚಾಗುತ್ತಿದೆ. ವಿಪಕ್ಷಗಳನ್ನು ಗುರಿಯಾಗಿಟ್ಟುಕೊಂಡು ಮೈತ್ರಿ ಪಕ್ಷದ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೆಲವು ದಿನಗಳ ಹಿಂದೆ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈಗ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಮೋದಿ ಎಂದು ಕೂಗಿದವರಿಗೆ ಕೆನ್ನೆಗೆ ಹೊಡೆಯಿರಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ಆತಂಕಕಾರಿ ಬೆಳವಣಿಗೆಯಾಗಿದೆ. ಮೈತ್ರಿ ಪಕ್ಷದ ನಾಯಕರ ಹೇಳಿಕೆ ವಿರುದ್ಧ ಚುನಾವಣ ಆಯೋಗಕ್ಕೆ ದೂರು ನೀಡಲಿದ್ದೇವೆ ಎಂದರು. ಸುರ್ಜೆವಾಲ ಬಂಧನಕ್ಕೆ ಆಗ್ರಹ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಕುರಿತು ಸುಳ್ಳು ಆರೋಪ ಮಾಡಿ, ನಕಲಿ ಡೈರಿ ಬಿಡುಗಡೆ ಮಾಡಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೆವಾಲ ಅವರನ್ನು ಬಂಧಿಸುವಂತೆ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.