Advertisement

ವಿನಯ್‌ ಕುಲಕರ್ಣಿ ರಾಜೀನಾಮೆಗೆ ಬಿಜೆಪಿ ಆಗ್ರಹ

01:11 PM Nov 28, 2017 | Team Udayavani |

ಮೈಸೂರು: ಸಚಿವ ವಿನಯ್‌ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಗಾಂಧಿಚೌಕದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾ ಧರಣಿ ನಡೆಸಿದ ಬಿಜೆಪಿ ಕಾರ್ಯಕರ್ತರು, ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆಯಲ್ಲಿ ಸಚಿವ ವಿನಯ್‌ ಕುಲಕರ್ಣಿ ಕೈವಾಡ ಇರುವುದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

Advertisement

ಯೋಗೀಶ್‌ ಗೌಡ ಕೊಲೆಯಲ್ಲಿ ಸಚಿವ ವಿನಯ ಕುಲಕರ್ಣಿ ಅವರ ಪಾತ್ರವಿದ್ದು, ಯೋಗೀಶ್‌ ಗೌಡ ಪ್ರಕರಣವನ್ನು ನಡೆಸುತ್ತಿರುವ ವಕೀಲ ಆನಂದರಿಗೆ ಸಚಿವರು ಬೆದರಿಕೆ ಹಾಕಿರುವುದು ಖಂಡನೀಯ. ಯೋಗೀಶ್‌ಗೌಡ  ಅವರ ಕುಟುಂಬದವರು ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದರೂ ರಾಜ್ಯ ಸರ್ಕಾರ ಅಹವಾಲು ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲವು ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿರುವುದೇ ಈ ರೀತಿಯ ಪ್ರಕರಣಗಳು ಮರುಕಳಿಸಲು ಕಾರಣ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಿತ ಕಾಯುವ ಬದಲಾಗಿ ತಮ್ಮ ಸಂಪುಟದ ಸಚಿವರ ಹಿತ ಕಾಯುತ್ತಿದ್ದಾರೆ.

ತಮ್ಮ ಸಚಿವರು ಒಂದಿಲ್ಲೊಂದು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರೂ ರಕ್ಷಿಸುತ್ತಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಹೆಸರು ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿದ್ದು, ಸಿಬಿಐ ಅವರ ವಿರುದ್ಧ ಚಾರ್ಜ್‌ಶೀಟ್‌ ಹಾಕಿದರೂ ರಾಜೀನಾಮೆ ಪಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರ ಬಿಜೆಪಿ ಬಿ.ಎಚ್‌.ಮಂಜುನಾಥ್‌, ಮುಖಂಡರಾದ ಮೈ.ಕಾ.ಪ್ರೇಮ್‌ಕುಮಾರ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next