ಬೆಂಗಳೂರು: ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಮುಗ್ಧ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ತುಷ್ಠಿàಕರಣ ನೀತಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವಾಗ ಎರಡೂ ಕಡೆಯವರನ್ನು ಪರಿಗಣಿಸಬೇಕು. ಆದರೆ, ಅಲ್ಪಸಂಖ್ಯಾತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವ ವಿಚಾರದಲ್ಲಿ ಮಾತ್ರ ಸರ್ಕಾರ ಆಸಕ್ತಿ ವಹಿಸಿರುವುದು ಸರಿಯಲ್ಲ. ಕೂಡಲೇ ಪೊಲೀಸ್ ಅಧಿಕಾರಿಗಳಿಗೆ ಬರೆದ ಪತ್ರ ವಾಪಸ್ ಪಡೆಯದಿದ್ದರೆ ರಾಜ್ಯದಲ್ಲಿ ಮತ್ತೂಮ್ಮೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಬಹುದು.
ಬಿಜೆಪಿ ಹೋರಾಟ ಮಾಡಬೇಕಾಗಬಹುದು ಎಂದು ಪಕ್ಷದ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಠಿàಕರಣ ಪ್ರವೃತ್ತಿಗೆ ಸರ್ಕಾರದ ಈ ಕ್ರಮ ಸಾಕ್ಷಿ. ಬಹುಸಂಖ್ಯಾ ತರನ್ನು ಒಡೆದು ಆಳುವುದರ ಜತೆಗೆ ಅಲ್ಪಸಂಖ್ಯಾತರು, ಬಹುಸಂಖ್ಯಾತರ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಇದಾಗಿದೆ. ಇಂತಹ ನೀತಿಗಳು ರಾಜ್ಯದ ಹಿತಾಸಕ್ತಿಗೆ ಮಾರಕ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನಸಿಕ ಖನ್ನತೆಗೆ ಒಳಗಾಗಿ ಭವಿಷ್ಯದ ಬಗ್ಗೆ ಆತಂಕಗೊಂಡು ಈ ರೀತಿ ವರ್ತಿಸುತ್ತಿದ್ದು, ಅವರದ್ದು ವಿನಾಶ ಕಾಲೇ ವಿಪರೀತ ಬುದ್ಧಿ ಎನ್ನುವಂತಾಗಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ಇನ್ನೊಂದೆಡೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ಗಮನಿಸಿದಾಗ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಹತ್ಯೆ ಹಿಂದೆ ಸಿದ್ದರಾಮಯ್ಯ ಕೈವಾಡ ವಿರುವ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸ್ ಠಾಣೆಗಳಲ್ಲಿ, ಜೈಲುಗಳಲ್ಲಿ ಇರುವ ಎಲ್ಲ ಅಲ್ಪಸಂಖ್ಯಾತ ಕ್ರಿಮಿನಲ್‌ಗಳನ್ನು ಹೊರಗೆ ಬಿಡುವಂತೆ, ಅವರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಈಗ ಆದೇಶಿದ್ದಾರೆ. ಚುನಾವಣೆ ಸಂದರ್ಭದಲ್ಲಿ ದಂಗೆಯೆಬ್ಬಿಸುವುದು ಅವರ ಉದ್ದೇಶ. ಸಿರಿಯಾ ಭಯೋತ್ಪಾದಕರನ್ನು ಬೆಂಬಲಿಸುವವರು, ಬೆಂಗಳೂರಿನಲ್ಲಿರುವ ಅಕ್ರಮ ಬಾಂಗ್ಲಾ ದೇಶೀಯರಿಗೆ ಉತ್ತೇಜನ ನೀಡುವ ವರ ಜತೆ ಸಿಎಂ ಇದ್ದಾರೆ ಎಂದು ಕಿಡಿ ಕಾರಿದ್ದಾರೆ.
ಟ್ವಿಟರ್‌ನಲ್ಲೂ ಚರ್ಚೆ: ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಮುಗಟಛಿ ಅಲ್ಪಸಂಖ್ಯಾತರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಟ್ವಿಟರ್ ಪೇಜ್‌ನಲ್ಲಿ “ಕಾಂಗ್ರೆಸ್ ವಿತ್ ಜಿಹಾದೀಸ್’ ಹ್ಯಾಷ್‌ಟ್ಯಾಗ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸಿ.ಟಿ.ರವಿ, ಜಾತ್ಯತೀತ ಸರ್ಕಾರ 2013ರ ನಂತರ ಅಲ್ಪಸಂಖ್ಯಾತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಮುಂದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.